ಕರ್ನಾಟಕ

ಎಪಿಎಂಸಿ ಚುನಾವಣಾ ಪ್ರಚಾರದ ಅಖಾಡಕ್ಕೆ ಧುಮುಕಿದ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ

Pinterest LinkedIn Tumblr

ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ತಾಲೀಮು ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎಪಿಎಂಸಿ ಚುನಾವಣೆ ಪ್ರಚಾರಕ್ಕೆ ಧುಮುಕಿ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳಲು ಮುಂದಾಗಿದ್ದಾರೆ.

ಎಪಿಎಂಸಿ ಚುನಾವಣೆ ಘೋಷಣೆಯಾಗುತ್ತಿದ್ದಂತೆ ವರುಣಾ ಕ್ಷೇತ್ರದ ಸುತ್ತಮುತ್ತಲ ಹಳ್ಳಿಗಳಿಗೆ ಪಾದಯಾತ್ರೆಯ ಮೂಲಕ ತೆರಳಿ, ಸಭೆ ನಡೆಸಿ ಸಾರ್ವಜನಿಕರ ಅಭಿಪ್ರಾಯಗಳಿಗೆ ಮನ್ನಣೆ ನೀಡುತ್ತಿದ್ದಾರೆ. ತಂದೆಯ ಆಣತಿಯಂತೆ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಯತೀಂದ್ರ ಬಯಸುತ್ತಿದ್ದಾರೆ.

ತಮ್ಮ ತಂದೆ ಸಿಎಂ ಸಿದ್ದರಾಮಯ್ಯ ಅವರ ಸೂಚನೆಯಂತೆ ಉದ್ಬೂರು, ಮಾರ್ಬಳ್ಳಿ, ಮಾರ್ಬಳ್ಳಿ ಹುಂಡಿ, ಜಯಪುರ, ರತ್ನನಹಳ್ಳಿ ಸೇರಿದಂತೆ ಹಲವು ಗ್ರಾಮಗಳಿಗೆ ತೆರಳಿ ಎಂಪಿಎಂಸಿ ಚುನಾವಣೆ ಪ್ರಚಾರ ಮಾಡಿ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಮತ ನೀಡಿ ಎಂದು ಕೇಳಿದ್ದಾರೆ. ಪಕ್ಷದ ಪ್ರಭಾವಿ ಮುಖಂಡರೊಂದಿಗೆ ಕಾಣಿಸಿಕೊಳ್ಳುತ್ತಿದ್ದ ಯತೀಂದ್ರ, ಈಗ ಕಾರ್ಯಕರ್ತರು ಕರೆದ ಸಭೆಯಲ್ಲೂ ಭಾಗಿಯಾಗುತ್ತಿದ್ದಾರೆ.

Comments are closed.