ಬೆಂಗಳೂರು, ಜ.೧೬: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ತವ್ಯ ನಿರತ ಸಿಐಎಸ್‌ಎಫ್ ಪೇದೆಯೊಬ್ಬ ಸರ್ವೀಸ್ ರಿವಾಲ್ವರ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮಹಾರಾಷ್ಟ್ರ ಮೂಲದ ಸುರೇಶ್ ಗಾಯಕ್‌ವಾಡ್ (೩೨) ಆತ್ಮಹತ್ಯೆಗೆ ಶರಣಾದ ಪೊಲೀಸ್ ಸಿಬ್ಬಂದಿ. ಇವರು ವಿಮಾನ ನಿಲ್ದಾಣದ ಗೇಟ್ ನಂ.೨ರಲ್ಲಿ ಕರ್ತವ್ಯದಲ್ಲಿದ್ದರು. ಇಂದು ಬೆಳಗ್ಗೆ ಏಕಾಏಕಿ ತನ್ನಲ್ಲಿದ್ದ ಬಂದೂಕಿನಿಂತ ತಲೆಗೆ ಗುಂಡು ಹಾರಿಸಿಕೊಂಡಿದ್ದಾರೆ. ಕುಸಿದು ಬಿದ್ದ ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅವರು ಅಷ್ಟರಲ್ಲೇ ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಪೇದೇ ಮಹಾರಾಷ್ಟ್ರದ ಸಾಂಗ್ಲಿ ಮೂಲದವರಾಗಿದ್ದಾರೆ. ಗಾಯಕ್‌ವಾಡ್ ಸುರೇಶ್ ಮಹದೇವ ಹಾಗೂ ಗಾಯಕ್‌ವಾಡ್ ಸುನಂದಾ ಸುರೇಶ್ ಅವರ ಪುತ್ರನಾಗಿರುವ ಸುರೇಶ್ ಹಲವು ವರ್ಷಗಳಿಂದ ವಿಮಾನನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆಗಾಗ್ಗೆ ರಜೆ ಹಾಕುತ್ತಿದ್ದರು. ಇತ್ತೀಚೆಗೆ ಪತ್ನಿಗೆ ವಿಚ್ಚೇಧನ ನೀಡಿದ್ದರು. ಈ ವಿವಾದದ ಹಿನ್ನೆಲೆಯಲ್ಲಿ ಅವರು ರಜೆ ಹಾಕುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
sಸ್ಥಳಕ್ಕೆ ಡಿಸಿಪಿ ಡಾ.ಹರ್ಷ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅವರು ಕುಟುಂಬದವರಿಗೆ ವಿಷಯ ತಿಳಿಸಿದ್ದು, ಅವರು ಬಂದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಹಸ್ತಾಂತರಿಸಲಾಗುವುದು ಎಂದು ಹರ್ಷ ತಿಳಿಸಿದ್ದಾರೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.
ಕರ್ನಾಟಕ
Comments are closed.