
ಮೈಸೂರು: ಮಹಾದಾಯಿ ಮತ್ತು ಕಾವೇರಿ ವಿಚಾರದಲ್ಲಿ ರಾಜ್ಯದ ಪರ ಧ್ವನಿ ಎತ್ತದ ಬಿಜೆಪಿಯ ಸಂಸದರ ಭಾವಚಿತ್ರಕ್ಕೆ ಸನ್ಮಾನ ಮಾಡಿ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದರು.
ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಕೋಟೆ ಆಂಜನೇಯ ಸ್ವಾಮಿ ದೇಗುಲದ ಎದುರು ಜಮಾಯಿಸಿದ ಕಾಂಗ್ರೆಸ್ ಕಾರ್ಯರಕರ್ತರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ಜಲ್ಲಿಕಟ್ಟುಗೆ ಸ್ಪಂದಿಸಿದಷ್ಟು ಶೀಘ್ರವಾಗಿ ಕಂಬಳಕ್ಕೆ ಸ್ಪಂದಿಸಲಿಲ್ಲ. ಮಹದಾಯಿ ಹಾಗೂ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಮಾತನಾಡಲಿಲ್ಲ ಎಂದು ಆರೋಪಿಸಿದರು.
ರಾಜ್ಯದ ಕಂಬಳ ಕ್ರೀಡೆಗೆ ಅನುಮತಿ ಇಲ್ಲ. ತಮಿಳುನಾಡಿನಲ್ಲಿ ಜಲ್ಲಿಕಟ್ಟುವಿಗೆ ಅನುಮತಿ ನೀಡಿದ್ದಿರಿ ಎಂದು ದೂರಿದರು.
Comments are closed.