ಚಿಕ್ಕೋಡಿ(ಜ.23): ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ಬಿಜೆಪಿ ಸೇರುವುದಾದರೆ ಸೇರಲಿ ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಮುಖಂಡರೊಂದಿಗೆ ಚರ್ಚಿಸಲು ನಾನು ಸಿದ್ಧನಿದ್ದೇನೆ ಎಂದು ವಿಧಾನ ಪರಿಷತ್ತಿನ ವಿಪಕ್ಷ ನಾಯಕರಾದ ಕೆ.ಎಸ್. ಈಶ್ವರಪ್ಪ ಆಹ್ವಾನಿಸಿದ್ದಾರೆ.
ಚಿಕ್ಕೋಡಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಶ್ವರಪ್ಪ ಜೆಡಿಎಸ್ ಸೇರುತ್ತಾರೆ, ಬೇರೆ ಪಕ್ಷಕ್ಕೆ ಹೋಗುತ್ತಾರೆ ಎನ್ನುವುದು ವದಂತಿ ಬಿಟ್ಟರೆ ಮತ್ತೇನಿಲ್ಲ. ಬಿಜೆಪಿ ಬಿಟ್ಟು ಬೇರೆ ಪಕ್ಷ ಸ್ಥಾಪಿಸುವುದು ತಾಯಿಗೆ ದ್ರೋಹ ಬಗೆದಂತೆ. ನನ್ನ ಜೀವ ಇರುವವರೆಗೂ ಬಿಜೆಪಿಯಲ್ಲೇ ಇರುತ್ತೇನೆ. ಯಡಿಯೂರಪ್ಪ ಅವರಿಗೆ ಬ್ರಿಗೇಡ್ ಬಗ್ಗೆ ಅರ್ಥವಾಗುತ್ತಿಲ್ಲ. ಯಾವುದೇ ಕಾರಣಕ್ಕೂ ಬ್ರಿಗೇಡ್ ನಿಲ್ಲಿಸುವುದಿಲ್ಲ ಎಂದು ಹೇಳಿದರು.
ಬಿಜೆಪಿಯಲ್ಲಿ ಈಶ್ವರಪ್ಪ ಅವರ ಮಾತಿಗೆ ಬೆಲೆಯಿಲ್ಲ ಎನ್ನುವ ಹಿನ್ನಲೆಯಲ್ಲಿ ಜೆಡಿಎಸ್ ಅಥವಾ ಬೇರೆ ಪಕ್ಷ ಸೇರುತ್ತಾರೆ ಎನ್ನುವ ವದಂತಿ ಹರಡಿರುವ ಕಾರಣ ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕ
Comments are closed.