ಕರ್ನಾಟಕ

ಮಹದಾಯಿ ವಿವಾದ: ರಾಜ್ಯದ ರೈತರ ಪ್ರತಿಭಟನೆ ತೀವ್ರ

Pinterest LinkedIn Tumblr


ಹುಬ್ಬಳ್ಳಿ: ಮಹದಾಯಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ರೈತರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ.
ಹುಬ್ಬಳ್ಳಿಯ ಲಿಂಗರಾಜ ಸರ್ಕಲ್ ಬಳಿ ಪ್ರತಿಭಟನಾ ರ್ಯಾಲಿ ಆರಂಭಿಸಿದ ರೈತರು ಪ್ರಮುಖ ರಸ್ತೆಗಳಲ್ಲಿ ಮಹದಾಯಿ ನದಿ ನೀರು ಹಂಚಿಕೆಯನ್ನು ಅನುಷ್ಠಾನಗೊಳಿಸುವಂತೆ ಆಗ್ರಹಿಸಿದರು. ರೈತರ ಪ್ರತಿಭಟನಾ ರ್ಯಾಲಿ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ನೂರಾರು ಸಂಖ್ಯೆಯಲ್ಲಿ ಪೊಲೀಸರು ಜಮಾಯಿಸಿದ್ದರು.
ಲಿಂಗರಾಜು ಸರ್ಕಲ್ ಬಳಿ ಕಿರೇಸುರ್, ಪಡೇಸೂರ್, ಗೊಬ್ಬರಗುಂಪಿ, ಅಲ್ಗಾವಾಡಿ ಮತ್ತು ಇನ್ನಿತರ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ರೈತರು ಸೇರಿದ್ದು ನಲಗುಂದ ಕಡೆ ರ್ಯಾಲಿ ನಡೆಸಲು ಮುಂದಾದಾಗ ಪೊಲೀಸರು ಹಲವನ್ನು ವಶಕ್ಕೆ ಪಡೆದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಬಸ್ ಸಂಚಾರ ಮತ್ತು ಅಂಗಡಿ ಮುಗ್ಗಟ್ಟುಗಳು ಬಂದ್ ಆಗಿದ್ದವು.
ರೈತರ ಪ್ರತಿಭಟನಾ ರ್ಯಾಲಿಗೆ ಸೂಕ್ತ ಭದ್ರತೆಯನ್ನು ಒದಗಿಸಲಾಗಿತ್ತು ಎಂದು ಜನರಲ್ ಇನ್ಸ್ ಪೆಕ್ಟರ್ ರಾಮಚಂದ್ರ ರಾವ್ ತಿಳಿಸಿದ್ದಾರೆ.

Comments are closed.