ಕರ್ನಾಟಕ

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿಗೆ ಎಸ್‌.ಎಂ. ಕೃಷ್ಣ ಸೇರ್ಪಡೆ?

Pinterest LinkedIn Tumblr


ಬೆಂಗಳೂರು: ಕಾಂಗ್ರೆಸ್‌ ಹಿರಿಯ ಮುಖಂಡ ಎಸ್‌.ಎಂ. ಕೃಷ್ಣ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ.

ಫೆ.6ರಂದು ಕೃಷ್ಣ ಅವರು ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ. ಅಂದೇ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಭೇಟಿ ಮಾಡುವ ಕಾರ್ಯಕ್ರಮ ಇದೆ.

ಭಾನುವಾರ ಬೆಳಿಗ್ಗೆ 11ಕ್ಕೆ ಮಾಧ್ಯಮ ಗೋಷ್ಠಿ ನಡೆಸಲಿದ್ದು, ರಾಜೀನಾಮೆಗೆ ಕಾರಣವಾದ ಪರಿಸ್ಥಿತಿ ಕುರಿತು ಕೃಷ್ಣ ಅವರು ವಿವರಿಸಲಿದ್ದಾರೆ.

ಪ್ರಧಾನಿ ಮೋದಿ ಅವರನ್ನು ಕೃಷ್ಣ ಭೇಟಿ ಮಾಡಲಿದ್ದಾರೆ ಎಂಬ ವದಂತಿಯಿಂದಾಗಿ ಅವರು ಬಿಜೆಪಿಗೆ ಸೇರ್ಪಡೆ ಆಗಬಹುದು ಎಂದು ರಾಜಕೀಯ ವಲಯದಲ್ಲಿ ವ್ಯಾಖ್ಯಾನಿಸಲಾಗುತ್ತಿದೆ.

ಕಳೆದ ಐದು ದಶಕಗಳಿಗೂ ಹೆಚ್ಚು ಸಮಯ ಸಕ್ರಿಯ ರಾಜಕಾರಣದಲ್ಲಿದ್ದ ಕೃಷ್ಣ ಅವರು, 1999ರಿಂದ 2004ರವರೆಗೆ ಮುಖ್ಯಮಂತ್ರಿ ಆಗಿದ್ದರು. 2009ರ ಮೇ ನಿಂದ 2012ರ ಅಕ್ಟೋಬರ್‌ವರೆಗೆ ವಿದೇಶಾಂಗ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

Comments are closed.