ಕರ್ನಾಟಕ

ಕೇಂದ್ರ ರೈತರ ಸಾಲ ಮನ್ನಾ ಮಾಡಲಿ ಬಿಡಲಿ, ರಾಜ್ಯ ಮಾಡುತ್ತದೆ: ಸಿದ್ದರಾಮಯ್ಯ

Pinterest LinkedIn Tumblr


ಬೆಂಗಳೂರು: ಬೆಂಗಳೂರು: ಕೇಂದ್ರ ಸರಕಾರ ಸಾಲವನ್ನು ಮನ್ನಾ ಮಾಡಲಿ ಬಿಡಲಿ, ರಾಜ್ಯ ಸರಕಾರ ಸಾಲ ಮನ್ನಾ ಮಾಡಲು ಸಿದ್ದವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರೈತರ ಸಾಲ ಮನ್ನಾ ಮಾಡುವಂತೆ ಕೇಂದ್ರ ಸರಕಾರಕ್ಕೆ ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ, ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿಲ್ಲ. ಆದ್ದರಿಂದ ಅವರು ಮಾಡದಿದ್ದರೆ ಬಿಡಲಿ. ರಾಜ್ಯ ಸರಕಾರ ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ಸಾಲ ಮನ್ನಾ ಮಾಡಲಿದೆ ಎಂದು ತಿಳಿಸಿದ್ದಾರೆ.

ರಾಜ್ಯಕ್ಕೆ ಬರಪರಿಹಾರ ನಿಧಿ ಬಿಡುಗಡೆಗೆ ಕೇಂದ್ರ ಸರಕಾರ ಅಗತ್ಯ ಕ್ರಮ ಕೈಗೊಂಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.

ಸಚಿವ ಅನಂತ್ ಕುಮಾರ್ ಹೇಳಿಕೆಗೆ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.

Comments are closed.