ಬೆಂಗಳೂರು: ಫೆಬ್ರವರಿ ಮೂರರಂದು ಬೆಂಗಳೂರಿನ ಕೋಗಿಲು ಕ್ರಾಸ್ ಬಳಿ ನಡೆದ ಶೂಟೌಟ್ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಡಬಗೆರೆ ಶ್ರೀನಿವಾಸ್ ಇದೀಗ ಕೋಮಾ ಹಂತದಿಂದ ಹೊರಬಂದಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಸಂಜೆ ವೇಳೆಗೆ ಅವರು ಸುಧಾರಿಸಿಕೊಂಡರೆ ಹಿರಿಯ ಪೊಲೀಸ್ ಅಧಿಕಾರಿಗಳು ಅವರಿಂದ ಹೇಳಿಕೆ ಪಡೆಯುವ ನಿರೀಕ್ಷೆಯಿದೆ. ಶ್ರೀನಿವಾಸ್ ಹೆಬ್ಬಾಳದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂದರ್ಭದಲ್ಲಿ ಹೆಚ್ಚಿನ ಮಾಹಿತಿ ಹೊರ ಬೀಳುವ ಸಾಧ್ಯತೆಯಿದೆ.
ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ಬಿಜೆಪಿ ಶಾಸಕ ವಿಶ್ವನಾಥ್ ಹೆಸರು ಕೂಡಾ ಪ್ರಕರಣದಲ್ಲಿ ಕೇಳಿಬಂದ ಹಿನ್ನಲೆಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿ ಸಮಾಲೋಚನೆ ನಡೆಸಿದ್ದಾರೆ.
Comments are closed.