ಕರ್ನಾಟಕ

ಟಿಪ್ಪು ಜಯಂತಿ ಕುರಿತು ಸಚಿವ ಅನಂತ ಕುಮಾರ್ ಹೆಗಡೆ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

Pinterest LinkedIn Tumblr

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಲಾಗುತ್ತಿರುವ ಟಿಪ್ಪು ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಯೆಲ್ಲಿ ತಮ್ಮ ಹೆಸರು ಮುದ್ರಿಸದಂತೆ ಕೇಂದ್ರ ಸಚಿವ ಅನಂತ ಕುಮಾರ್ ಹೆಗ್ಡೆಯವರು ಬರೆದಿರುವ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಚಿವ ಅನಂತ್ ಕುಮಾರ್ ಹೆಗ್ಡೆಯವರ ಪತ್ರ ಕುರಿತಂತೆ ಇಂದು ಪ್ರತಿಕ್ರಿಯೆ ನೀಡಿರುವ ಅವರು, ಒಬ್ಬ ಸಚಿವರಾಗಿ ಅನಂತ್ ಕುಮಾರ್ ಅವರು ಈ ರೀತಿ ಮಾತನಾಡುವುದು ಸರಿಯಲ್ಲ. ರಾಜಕೀಯವಾಗಿ ಟಿಪ್ಪು ಅವರನ್ನು ವಿರೋಧ ಮಾಡುವುದಕ್ಕೂ ಮುನ್ನ ಅವರ ಬಗ್ಗೆ ಸರಿಯಾಗಿ ಓದಿಕೊಳ್ಳಬೇಕಿದೆ. ಟಿಪ್ಪು ನಿಜವಾಗಿಯೂ ಮೊದಲ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು ಎಂದು ಹೇಳಿದ್ದಾರೆ.

ಶಿಷ್ಟಾಚಾರವನ್ನು ಪಾಲನೆ ಮಾಡಿ ನಾವು ಕೇಂದ್ರ ಸಚಿವರ ಹೆಸರನ್ನು ಆಮಂತ್ರಣ ಪತ್ರಿಕೆಯಲ್ಲಿ ಹಾಕುತ್ತಿದ್ದೇವೆ. ಆಮಂತ್ರಣ ಪತ್ರಿಕೆಯನ್ನು ಕೇಂದ್ರ ಹಾಗೂ ರಾಜ್ಯದ ಎಲ್ಲಾ ನಾಯಕರಿಗೂ ಕಳುಹಿಸಲಾಗುತ್ತದೆ. ಕಾರ್ಯಕ್ರಮಕ್ಕೆ ಬರುವುದು, ಬಿಡುವುದು ಅವರಿಗೆ ಬಿಟ್ಟ ವಿಚಾರ ಎಂದು ಹೇಳಿದ್ದಾರೆ.

Comments are closed.