ಕರ್ನಾಟಕ

ಅನಂತಕುಮಾರ್‌ ಹೆಗಡೆ ವಿರುದ್ಧ ಕ್ರಮಕ್ಕೆ ಪತ್ರ

Pinterest LinkedIn Tumblr


ಬೆಂಗಳೂರು: ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರು ಹಾಕದಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವ ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಮೈಸೂರು ಪೇಂಟ್ಸ್‌ ಆ್ಯಂಡ್‌ ವಾರ್ನಿಶ್‌ ಲಿ. ಅಧ್ಯಕ್ಷ ಎಚ್‌.ಎ. ವೆಂಕಟೇಶ್‌ ರಾಷ್ಟ್ರಪತಿ ರಾಮನಾಥ ಕೋವಿಂದ್‌ಗೆ ಪತ್ರ ಬರೆದಿದ್ದಾರೆ.

ಅನಂತಕುಮಾರ್‌ ಹೆಗಡೆ ಸಂವಿಧಾನ ಬದಟಛಿವಾಗಿ ಕೇಂದ್ರದ ಸಚಿವರಾಗಿ ಪ್ರಮಾಣ ಸ್ವೀಕರಿಸಿದ್ದು ಟಿಪ್ಪು ಜಯಂತಿಗೆ
ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಬಾರದು ಎಂದು ಹೇಳುವುದು ಸಮಾಜದಲ್ಲಿ ಧಾರ್ಮಿಕ ಸಾಮರಸ್ಯ ಕೆಡಿಸುವ ಪ್ರಯತ್ನವಾಗಿದೆ.

ಒಬ್ಬ ಜನಪ್ರತಿನಿಧಿಯಾಗಿ ಅನಂತಕುಮಾರ್‌ ಹೆಗಡೆ ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವುದು ಅವರ ಕರ್ತವ್ಯ. ಅದರ ಬದಲು ಕಾರ್ಯಕ್ರಮಕ್ಕೆ ಕರೆಯಬೇಡಿ ಎನ್ನುವುದು ದುರಹಂಕಾರದ ಪರಮಾವಧಿ. ಟಿಪ್ಪು ಜಯಂತಿಯನ್ನು ವಿವಾದ ಮಾಡಿ, ರಾಜಕೀಯ ಲಾಭಕ್ಕಾಗಿ ವಿರೋಧಿಸುವುದು ಕೇಂದ್ರ ಮಂತ್ರಿಯ ಘನತೆಗೆ ತಕ್ಕುದಲ್ಲ. ಕಾನೂನು ಸುವ್ಯವಸ್ಥೆ ಹಾಳು ಮಾಡಿ, ಸಮಾಜದಲ್ಲಿ ಧರ್ಮ ಧರ್ಮಗಳ ನಡುವೆ ಜಗಳ ತಂದು ಸಮಾಜ ಒಡೆಯುವ ಇಂತಹ ವ್ಯಕ್ತಿಗಳ ವಿರುದಟಛಿ ಕ್ರಮ ಜರುಗಿಸಬೇಕೆಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

-ಉದಯವಾಣಿ

Comments are closed.