ಕರ್ನಾಟಕ

155 ಭರವಸೆ ಈಡೇರಿಸಿದ್ದೇವೆ, ಬಹಿರಂಗ ಚರ್ಚೆಗೆ ಬನ್ನಿ; ಸಿದ್ದರಾಮಯ್ಯ

Pinterest LinkedIn Tumblr


ಧಾರವಾಡ:ನಾವು ಅಧಿಕಾರಕ್ಕೆ ಬರುವ ಮುನ್ನ ಪ್ರಣಾಳಿಕೆಯಲ್ಲಿ 165 ಭರವಸೆ ನೀಡಿದ್ದೇವೆ. ಅದರಲ್ಲಿ ಈಗಾಗಲೇ 155 ಭರವಸೆ ಈಡೇರಿಸಿದ್ದೇವೆ. ನಮ್ಮ ಸಾಧನೆ ಅಲ್ಲಗಳೆಯಲು ಬಿಜೆಪಿ, ಜೆಡಿಎಸ್ ಗೆ ಸಾಧ್ಯವೇ ಇಲ್ಲ. ಕೋಮುವಾದ ಮಾಡೋದು ಬಿಟ್ಟು ಬಿಜೆಪಿ ಮುಖಂಡರು ನಮ್ಮ ಜತೆ ಚರ್ಚೆಗೆ ಬರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗವಾಗಿ ಸವಾಲು ಹಾಕಿದ್ದಾರೆ.

ನಾವು ಪ್ರಣಾಳಿಕೆಯಲ್ಲಿ ಇಲ್ಲದ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ.ನಾವು ರೈತರ ಸಾಲ ಮನ್ನಾ ಮಾಡಿದ್ದೇವೆ, ನೀವೂ (ಬಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹೇರಿ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಿಸಿ ಎಂದು ಸವಾಲು ಹಾಕಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಕರ್ನಾಟಕದಲ್ಲಿ ಮ್ಯಾಜಿಕ್ ಮಾಡ್ತಾರೆ ಅಂತ ತಿಳಿದುಕೊಂಡಿದ್ದಾರೆ. ಆದರೆ ಕರ್ನಾಟಕದಲ್ಲಿ ಶಾ ಮ್ಯಾಜಿಕ್ ನಡಯುವುದಿಲ್ಲ. ರಾಜ್ಯದ ಜನತೆ ತುಂಬಾ ಬದಲಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಿಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಹಾಗೂ ಸದಾನಂದ ಗೌಡರು ಅಂದು ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕೊಟ್ಟ ಭರವಸೆ ಈಡೇರಿಸಿಲ್ಲವಾಗಿತ್ತು ಎಂದರು.

ರೈತರ ಬಗ್ಗೆ ಮಾತನಾಡುವ ಹಕ್ಕು ಬಿಜೆಪಿಗಿಲ್ಲ, ರೈತರ ಸಾಲ ಮನ್ನಾ ಮಾಡಿಸಿಲ್ಲ, ಮಹದಾಯಿ ವಿವಾದ ಬಗೆಹರಿಸಲು ಪ್ರಧಾನಿ ಮೋದಿ ಅವರು ಮುಂದಾಗಿಲ್ಲ. ರಾಜೀ ಮೂಲಕ ಇತ್ಯರ್ಥಪಡಿಸಲು ಬಿಜೆಪಿ ಮುಖಂಡರು ಪ್ರಯತ್ನಿಸಿಲ್ಲ ಎಂದು ದೂರಿದರು.

-ಉದಯವಾಣಿ

Comments are closed.