
ಬೆಂಗಳೂರು: ಬಹುಕೋಟಿ ನಕಲಿ ಛಾಪಾಕಾಗದ ಹಗರಣದ ಕಿಂಗ್‌ಪಿನ್ ಅಬ್ದುಲಾ ಕರೀಂ ಲಾಲಾ ತೆಲಗಿ ನಗರದ ವಿಮ್ಸ್ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಲ ಮಾಧ್ಯಮಗಳು ಮತ್ತು ಸಾಮಾಜಿಕ ತಾಣಗಳಲ್ಲಿ ತೆಲಗಿ ನಿಧನ ಹೊಂದಿದ್ದಾನೆ ಎಂದು ವರದಿಯಾಗಿದೆ, ಆದರೆ ಈ ಬಗ್ಗೆ ಆಸ್ಪತ್ರೆ ಮೂಲಗಳಿಂದ,ಜೈಲಿನ ಅಧಿಕಾರಿಗಳಿಂದ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಾಗಿದೆ.
30 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ 56 ವರ್ಷ ಪ್ರಾಯದ ತೆಲಗಿ ಹೃದ್ರೋಗ ಹಾಗೂ ಮಧುಮೇಹದಿಂದ ಬಳಲುತ್ತಿದ್ದು, ಬಹು ಅಂಗಾಂಗ ವೈಫಲ್ಯಕ್ಕೀಡಾಗಿದ್ದ. ಆತನಿಗೆ ಚಿಕಿತ್ಸೆ ನೀಡಲು ಹೈಕೋರ್ಟ್ ಸೂಚನೆ ನೀಡಿತ್ತು.
ವಾರದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ತೆಲಗಿ ಚಿಕಿತ್ಸೆ ಗೆ ಸ್ಪಂದಿಸುತ್ತಿರಲಿಲ್ಲ.ವೆಂಟಿಲೇಟರ್‌ನಲ್ಲೇ ಆತನಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದು ಬಂದಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
-ಉದಯವಾಣಿ
Comments are closed.