ಕರ್ನಾಟಕ

ಹಳೇ ಮೈಸೂರು ಮೇಲೆ ಬಿಜೆಪಿ ಕಣ್ಣು: ಎಸ್ಎಂ ಕೃಷ್ಣ ಪುತ್ರಿ ಶಾಂಭವಿ ಕಣಕ್ಕಿಳಿಸಲು ಸಿದ್ಧತೆ?

Pinterest LinkedIn Tumblr


ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸೀಟ್ ಗೆಲ್ಲುವ ಯೋಜನೆಯನ್ನು ಹಾಕಿಕೊಂಡಿರುವ ಬಿಜೆಪಿ ಅದಕ್ಕೆ ಪೂರಕವಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದು ಹಳೇ ಮೈಸೂರು ಭಾಗದಲ್ಲಿ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಪುತ್ರಿ ಶಾಂಭವಿ ಅವರನ್ನು ಕಣ್ಣಕ್ಕಿಳಿಸಲು ಸಿದ್ಧತೆ ನಡೆಸಿದೆ.

ಹಳೇ ಮೈಸೂರು ಪ್ರಾಂತ್ಯದಲ್ಲಿ ಒಕ್ಕಲಿಗರೇ ನಿರ್ಣಾಯಕ ಮತದಾರರಾಗಿದ್ದು ಒಕ್ಕಲಿಗರ ಮತಗಳನ್ನು ಸಂಪಾದಿಸುವಲ್ಲಿ ಬಿಜೆಪಿ ಎಡವಿದೆ. ರಾಜ್ಯದಲ್ಲಿ 150 ಸೀಟುಗಳನ್ನು ಪಡೆಯಬೇಕಾದರೆ ಹಳೇ ಮೈಸೂರು ಪ್ರಾಂತ್ಯದಲ್ಲಿನ ಕ್ಷೇತ್ರಗಳನ್ನು ಗೆಲ್ಲುವುದು ಅನಿವಾರ್ಯ. ಈ ಹಿನ್ನೆಲೆಯಲ್ಲಿ ಮಂಡ್ಯ, ಮೈಸೂರಿನಲ್ಲಿ ಪ್ರಾಬಲ್ಯ ಹೊಂದಿರುವ ಎಸ್ಎಂ ಕೃಷ್ಣ ಅವರ ಪುತ್ರಿ ಶಾಂಭವಿ ಅವರನ್ನು ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಅವರ ಪ್ರಾಬಲ್ಯ ಹೆಚ್ಚಿರುವುದರಿಂದ ಆ ಭಾಗದಲ್ಲಿ ಯೋಗೇಶ್ವರ್ ಗೆಲುವು ನಿಶ್ಚಿತ ಈ ಹಿನ್ನೆಲೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವರ್ ಅವರನ್ನು ಕಣಕ್ಕಿಳಿಸಿದರೆ ಮದ್ದೂರಿನಿಂದ ಸಿಪಿ ಯೋಗೇಶ್ವರ್ ನಿಲ್ಲುವ ಸಾಧ್ಯತೆ ಇದೆ. ಇನ್ನು ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಸಿಪಿ ಯೋಗೇಶ್ವರ್ ಉಸ್ತುವಾರಿ ವಹಿಸಲಿದ್ದು ಈ ಮೂಲಕ ಡಿಕೆ ಶಿವಕುಮಾರ್ ಮತ್ತು ಹೆಚ್ ಡಿ ಕುಮಾರಸ್ವಾಮಿ ಪ್ರಬಾವ ತಗ್ಗಿಸುಲು ಬಿಜೆಪಿ ಬಿಗ್ ಪ್ಲಾನ್ ಮಾಡಿದೆ.

Comments are closed.