
ಮೈಸೂರು: ಸಂಬಂಧಿಕರ ಅನೈತಿಕ ಸಂಬಂಧದಿಂದ ಬೇಸತ್ತು ಫೇಸ್ ಬುಕ್ ನ ಕವರ್ ಪೇಜ್ ನಲ್ಲಿ ಡೆತ್ ನೋಟ್ ಹಾಕಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ತಾಲೂಕಿನ ಡಿ. ಸಾಲುಂಡಿ ಗ್ರಾಮದಲ್ಲಿ ನಡೆದಿದೆ.
ನವೀನ್ ನಾಯಕ್ ಆತ್ಮಹತ್ಯೆಗೆ ಶರಣಾದ ಯುವಕ. ಯುವಕ ಬರೋಬ್ಬರಿ 6 ಪುಟಗಳ ಡೆತ್ ನೋಟ್ ಬರೆದಿದ್ದು, ಡೆತ್ ನೋಟ್ ಫೇಸ್ ಬುಕ್ ಕವರ್ ಪೇಜ್ ಗೆ ಹಾಕಿರುವ ನವೀನ್, ಅಂತ್ಯದಲ್ಲಿ ಪ್ರಕರಣ ಮುಚ್ಚಿ ಹಾಕದಂತೆ ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾನೆ.
ಚಿಕ್ಕಮ್ಮ ಮಂಗಳ ಹಾಗೂ ಮಾವ ಹನುಮಂತು ನಡುವೆ ಅಕ್ರಮ ಸಂಬಂಧವಿತ್ತು. ಆ ಅಕ್ರಮ ಸಂಬಂಧದ ಬಗ್ಗೆ ಪ್ರಶ್ನಿಸಿದ್ದಕ್ಕೆ ಕಿರುಕುಳ ನೀಡುತ್ತಿದ್ದರು. ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾನೆ.
Comments are closed.