ಕರ್ನಾಟಕ

ಕುಣಿಗಲ್‌– ಮದ್ದೂರು ಹೆದ್ದಾರಿಯ ತೊರೆಶೆಟ್ಟಹಳ್ಳಿ ಬಳಿ ದಿಬ್ಬಣದ ಕ್ಯಾಂಟರ್‌ ಭೀಕರ ಅಪಘಾತ: 3 ವರ್ಷ ಬಾಲಕಿ ಸೇರಿ 13 ಮಂದಿ ಸಾವು, 30 ಮಂದಿಗೆ ಗಾಯ

Pinterest LinkedIn Tumblr

ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನಲ್ಲಿ ಭಾನುವಾರ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಮರಕ್ಕೆ ಕ್ಯಾಂಟರ್ ಢಿಕ್ಕಿ ಹೊಡೆದ ಪರಿಣಾಮ 13 ಮಂದಿ ಸಾವನ್ನಪ್ಪಿದ್ದಾರೆ.

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಮಾಚಹಳ್ಳಿ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಜನರನ್ನು ತುಂಬಿಕೊಂಡಿದ್ದ ಕ್ಯಾಂಟರ್ ಚನ್ನಪಟ್ಟಣದತ್ತ ಸಾಗಿತ್ತು. ಈ ವೇಳೆ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ 13 ಮಂದಿ ಸಾವನ್ನಪ್ಪಿ, ಅಪಘಾತದಲ್ಲಿ 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕ್ಯಾಂಟರ್ ನಲ್ಲಿ ಸುಮಾರು 50ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದ್ದು, ಈ ಪೈಕಿ 13 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳೀಯ ಶಾಸಕ ಡಿ.ಸಿ.ತಮ್ಮಣ್ಣ ಹಾಗೂ ಬಿಜೆಪಿ ತಾಲೂಕು ಅಧ್ಯಕ್ಷ ಲಕ್ಷ್ಮಣ್​ ಕುಮಾರ್, ಎಸ್​ಪಿ ರಾಧಿಕಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳಿಗೆ ಹಾಗೂ ಮೃತರ ಸಂಬಂಧಿಕರಿಗೆ ಸಾಂತ್ವನ ಹೇಳಿದರು.

ಇನ್ನು ಮೃತರನ್ನು ಬೀರಮ್ಮ (52) ಸಣ್ಣಮ್ಮ, ಪಾರ್ವತಮ್ಮ (50), ಜಯಮ್ಮ(55) ಬೀರಮ್ಮ(50), ಮಾದಮ್ಮ(60), ಶಿವಣ್ಣ(45), ಸರೋಜಮ್ಮ(55) ವಧುವಿನ ಸಹೋದರಿ ಪೂಜಾ (16), ಶ್ರುತಿ(3), ಸೋನು(6) ಹಾಗೂ ಶಿವಣ್ಣ (50) ಎಂದು ಗುರುತಿಸಲಾಗಿದ್ದು, ಎಲ್ಲರೂ ಯಡನಹಳ್ಳಿ ಹಾಗೂ ಅವಸರದಹಳ್ಳಿಯವರಾಗಿದ್ದಾರೆ ಎಂದು ತಿಳಿದುಬಂದಿದೆ. ಕಸ್ತೂರು ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೇಲ್ನೋಟಕ್ಕೆ ಚಾಲಕನ ಆಜಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು, ಕ್ಯಾಂಟರ್ ಚಾಲಕ ಕುಡಿದು ವಾಹನ ಚಾಲನೆ ಮಾಡುತ್ತಿದ್ದ ಎಂದು ಸ್ಥಳೀಯ ತಿಳಿಸಿದ್ದಾರೆ.

ಹೇಗಾಯ್ತು ಅಪಘಾತ?:
ಮದ್ದೂರು ತಾಲೂಕಿನ ಅವಸರದಹಳ್ಳಿ ಗ್ರಾಮದ ಯುವತಿಯೊಂದಿಗೆ ಚನ್ನಪಟ್ಟಣ ತಾಲೂಕಿನ ಶಿವಳ್ಳಿ ಗ್ರಾಮದ ಯುವಕನ ವಿವಾಹ ಸೋಮವಾರ ಚೆನ್ನಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಗದಿಯಾಗಿತ್ತು. ಭಾನುವಾರ ರಾತ್ರಿ ಆರಕ್ಷತೆಯಲ್ಲಿ ಪಾಲ್ಗೊಳ್ಳಲು ಸುಮಾರು 80 ಮಂದಿ ವಧುವಿನ ಬಂಧುಗಳು ಹಾಗೂ ಗ್ರಾಮಸ್ಥರು ಹಾಗೂ ಕ್ಯಾಂಟರ್​ ವೊಂದಲ್ಲಿ ತೆರಳುತ್ತಿದ್ದರು. ಮದ್ದೂರು-ಕಣಿಗಲ್ ಹೆದ್ದಾರಿಯ ಮಾಚಹಳ್ಳಿ ಗೇಟ್​ ಗೆ ಕ್ಯಾಂಟರ್ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಕ್ಯಾಟಂರ್ ಡಿಕ್ಕಿ ಹೊಡೆದಿದೆ. ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಮದ್ದೂರಿನ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದಾರಾದರೂ ಚಿಕಿತ್ಸೆ ಫಲಕಾರಿಯಾಗದೇ ಹಲವರು ಸಾವನ್ನಪ್ಪಿದ್ದಾರೆ.

ಅಪಘಾತ ನಡೆದ ಕ್ಷಣಾರ್ಧದ್ಲಲ್ಲಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಚೆನ್ನಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Comments are closed.