ಕರ್ನಾಟಕ

ಹಲ್ಲೆಗೆ ಕುಮ್ಮಕ್ಕು ನೀಡಿದ ಆರೋಪ; ಆಂದೋಲಾ ಸ್ವಾಮೀಜಿ ನ್ಯಾಯಾಂಗ ಬಂಧನಕ್ಕೆ: ಜೇವರ್ಗಿಯಲ್ಲಿ ಬಿಗಿ ಬಂದೋಬಸ್ತ್

Pinterest LinkedIn Tumblr

ಕಲಬುರ್ಗಿ: ಮುಸ್ಲಿಂ ಯುವಕನ ಮೇಲೆ ನಡೆದ ಹಲ್ಲೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಬಂಧಿತರಾಗಿರುವ ಶ್ರೀರಾಮ ಸೇನೆ ರಾಜ್ಯ ಘಟಕದ ಕಾರ್ಯಾಧ್ಯಕ್ಷ, ಜೇವರ್ಗಿ ತಾಲ್ಲೂಕು ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ ಸಿದ್ದಲಿಂಗ ಸ್ವಾಮೀಜಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸೋಮವಾರ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಕರೆತರುತ್ತಿದ್ದಾಗ ಮಠದ ಭಕ್ತರು ಹಾಗೂ ಗ್ರಾಮಸ್ಥರು ಪೊಲೀಸರ ಮೇಲೆ ಕಲ್ಲು ತೂರಿದ್ದರು. ಎಎಸ್.ಪಿ ಬಿ.ಜೆ.ಲೋಕೇಶಬಾಬು, ಚಿತ್ತಾಪುರ ಇನ್ ಸ್ಪೆಕ್ಟರ್, ನಾಲ್ಕು ಜನ ಕಾನ್ ಸ್ಟೆಬಲ್ ಗಳು ಗಾಯಗೊಂಡಿದ್ದರು.

ಮುಂಜಾಗ್ರತಾ ಕ್ರಮವಾಗಿ ಆಂದೋಲಾ ಹಾಗೂ ಜೇವರ್ಗಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಈಶಾನ್ಯ ವಲಯ ಐಜಿಪಿ ಅಲೋಕಕುಮಾರ, ಎಸ್ಪಿ ಎನ್.ಶಶಿಕುಮಾರ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ.

30 ಜನರು ವಶಕ್ಕೆ
ಕಲಬುರ್ಗಿ: ಜೇವರ್ಗಿ ತಾಲ್ಲೂಕು ಆಂದೋಲಾ ಕರುಣೇಶ್ವರ ಮಠದ ಸಿದ್ದಲಿಂಗ ಸ್ವಾಮೀಜಿ ಬಂಧನದ ವೇಳೆ ಪೊಲೀಸರ ಮೇಲೆ ಕಲ್ಲು ತೂರಿದ್ದ 30 ಜನರನ್ನು ಮಂಗಳವಾರ ವಶಕ್ಕೆ ಪಡೆಯಲಾಗಿದೆ.

Comments are closed.