ಕರ್ನಾಟಕ

ಬಿಎಸ್‌ವೈ 84 ದಿನಗಳ ಯಾತ್ರೆಗೆ ಚಾಲನೆ ನೀಡಲಿರುವ ಅಮಿತ್ ಶಾ

Pinterest LinkedIn Tumblr


ಬೆಂಗಳೂರು: ಮುಂದಿನ ವರ್ಷದ ಆರಂಭದಲ್ಲಿ ಕರ್ನಾಟಕದಲ್ಲಿ ವಿಧಾನಸಭೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ 84 ದಿನಗಳ ಯಾತ್ರೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಚಾಲನೆ ನೀಡಲಿದ್ದಾರೆ.
ಕೇಂದ್ರ ಸಚಿವರು, ರಾಜ್ಯದ ಬಿಜೆಪಿ ನಾಯಕರ ಉಪಸ್ಥಿತಿಯಲ್ಲಿ ನವೆಂಬರ್ 2 ರಂದು ಅಮಿತ್ ಶಾ ಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ 224 ಕ್ಷೇತ್ರಗಳಲ್ಲಿ ಹಾದುಹೋಗುವ 7,500 ಕಿ.ಮೀ. ಯಾತ್ರೆ ಜನವರಿ 28 ರಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿಯವರ ಸಾರ್ವಜನಿಕ ಸಭೆಯಲ್ಲಿ ಕೊನೆಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಅಮಿತ್ ಶಾ ಈಗಾಗಲೇ ಘೋಷಿಸಿದ್ದಾರೆ.

ಲಿಂಗಾಯುತ ಪ್ರಭಾವಿ ನಾಯಕರಾದ ಯಡಿಯೂರಪ್ಪ 2008ರಲ್ಲಿ ಸ್ವಂತಬಲದ ಮೇಲೆ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದರು. ಆದರೆ, ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Comments are closed.