ಕರ್ನಾಟಕ

ನಮಗೇನೂ ಗೊತ್ತಿಲ್ಲ..ಖಾಸಗಿ ವೈದ್ಯರ ಮುಷ್ಕರಕ್ಕೆ CM, ರಮೇಶ್ ಕುಮಾರ್!

Pinterest LinkedIn Tumblr


ಬೆಂಗಳೂರು/ಕೋಲಾರ: ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಯಲ್ಲಿನ ಕೆಲ ಅಂಶ ಕೈಬಿಡುವಂತೆ ಒತ್ತಾಯಿಸಿ ಖಾಸಗಿ ಆಸ್ಪತ್ರೆಗಳು ಶುಕ್ರವಾರ ಬೆಳಗ್ಗೆಯಿಂದ ವೈದ್ಯರುಗಳು ನಡೆಸುತ್ತಿರುವ ಮುಷ್ಕರದ ಬಗ್ಗೆ ಆರೋಗ್ಯ ಸಚಿವ ರಮೇಶ್ ಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ತಮಗೇನೂ ಗೊತ್ತಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಯಾವ ಕಾರಣಕ್ಕಾಗಿ ಮುಷ್ಕರ ಮಾಡ್ತಿದ್ದಾರೆ?ರಮೇಶ್ ಕುಮಾರ್ ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರಕ್ಕೆ ಸಂಬಂಧಿಸಿದಂತೆ ಕೋಲಾರದಲ್ಲಿ ಸುದ್ದಿಗಾರರು ಆರೋಗ್ಯ ಸಚಿವ ರಮೇಶ್ ಕುಮಾರ್ ಅವರನ್ನು ಪ್ರಶ್ನಿಸಿದಾಗ, ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಬಗ್ಗೆ ನನಗೆ ಗೊತ್ತಿಲ್ಲ. ನಿಮಗೇನಾದರು ಗೊತ್ತಿದ್ರೆ ಹೇಳಿ ಎಂದು ಮರು ಪ್ರಶ್ನಿಸಿದರು.

ಖಾಸಗಿ ವೈದ್ಯರು ಯಾವ ಕಾರಣಕ್ಕಾಗಿ ಮುಷ್ಕರ ಮಾಡುತ್ತಿದ್ದಾರೆಂದು ಗೊತ್ತಿಲ್ಲ. , ಖಾಸಗಿ ವೈದ್ಯರ ಜತೆ ಚರ್ಚಿಸಿಯೇ ವಿಧೇಯಕ ಮಂಡಿಸಿದ್ದೇನೆ ಎಂದು ಸಚಿವರು ಪುನರುಚ್ಚರಿಸಿದರು.

ಮುಷ್ಕರದ ಬಗ್ಗೆ ಗೊತ್ತಿಲ್ಲ, ಸರ್ಕಾರಿ ಆಸ್ಪತ್ರೆಗೆ ಸೂಚನೆ ನೀಡಿದ್ದೇನೆ: ಸಿಎಂ
ಯಾವ ಕಾರಣಕ್ಕೆ ಮುಷ್ಕರ ನಡೆಸುತ್ತಿದ್ದಾರೆಂದು ಗೊತ್ತಿಲ್ಲ. ಜನಸಾಮಾನ್ಯರಿಗೆ ತೊಂದರೆಯಾಗಬಾರದೆಂದು ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಸೂಚನೆ ನೀಡಿದ್ದೇನೆ. ಮುಂದಿನ ಅಧಿವೇಶನದಲ್ಲಿ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆ ಜಾರಿಗೆ ತರಲು ಚಿಂತನೆ. ಅದು ವಿಧಾನಸಭೆ, ವಿಧಾನಪರಿಷತ್ ನಲ್ಲಿ ಚರ್ಚೆ ಆಗಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

-ಉದಯವಾಣಿ

Comments are closed.