ಕರ್ನಾಟಕ

ಒಬ್ಬ ತಂದೆಗೆ ಹುಟ್ಟಿದವರು ಲಿಂಗಾಯತರು. ಐವರಿಗೆ ಹುಟ್ಟಿದವರು ವೀರಶೈವರು: ಸ್ವಾಮೀಜಿ ವಿವಾದಾತ್ಮಕ ಹೇಳಿಕೆ

Pinterest LinkedIn Tumblr


ಹುಬ್ಬಳ್ಳಿ: ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಬಗ್ಗೆ ಸಾಕಷ್ಟು ಗೊಂದಲಗಳಿವೆ. ಈ ಬಗ್ಗೆ ಚರ್ಚೆಗಳು ಜೋರಾಗಿ ಸಾಗುತ್ತಿವೆ. ಇಂಥ ಸಮಯದಲ್ಲಿ ಕೂಡಲ ಸಂಗಮ ಪಂಚಮ ಸಾಲಿ ಪೀಠದ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ

ಒಬ್ಬ ತಂದೆಗೆ ಹುಟ್ಟಿದವರು ಲಿಂಗಾಯತರು. ಐವರು ತಂದೆಗಳಿಗೆ ಹುಟ್ಟಿದವರು ವೀರಶೈವರು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದರು.

ನಗರದ ನೆಹರು ಮೈದಾನದಲ್ಲಿ ಭಾನುವಾರ ನಡೆದ ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಒತ್ತಾಯಿಸಿ ಹಮ್ಮಿಕೊಂಡಿದ್ದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ವೀರಶೈವರು ಎಂದು ಹೇಳಿಕೊಳ್ಳುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಶಾಸಕರಾದ‌ ಅರವಿಂದ ಬೆಲ್ಲದ ಹಾಗೂ ಪ್ರದೀಪ್ ಶೆಟ್ಟರ್ ಬೆಂಗಳೂರಿನಲ್ಲಿ ನಡೆಯುವ‌ ಹೋರಾಟಕ್ಕೆ ಕೈಜೋಡಿಸಬೇಕು ಎಂದು ಮತ್ತೊಮ್ಮ ಮನವಿ ಮಾಡಿದರು.

ರಾಜಕಾರಣಿಗಳೇ ನಿಮ್ಮದು ಯಾವುದೇ ಪಕ್ಷದವರೇ ಆಗಿದ್ದರೂ ಹೊರಾಟಕ್ಕೆ ಕೈಜೋಡಿಸಬೇಕೋ ಹೊರೆತು ಲಿಂಗಾಯತ ಹೋರಾಟ ಹತ್ತಿಕ್ಕುವ ಹುನ್ನಾರ ಮಾಡಬೇಡಿ ಎಂದು ಮನವಿ ಮಾಡಿದರು.

Comments are closed.