ಹುಬ್ಬಳ್ಳಿ: ಖಾಸಗಿ ವೈದ್ಯರ ಮುಷ್ಕರಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆಪ್ತರು ಬಲಿಯಾಗಿದ್ದಾರೆ.
ಚನ್ನಬಸಪ್ಪ ಹಳ್ಯಾಳ ಮೃತ ವ್ಯಕ್ತಿ. ಹೃದಯಾಘಾತಕ್ಕೆ ಒಳಗಾದ ಅವರನ್ನು ಖಾಸಗಿ ಕರೆದೊಯ್ದಿದ್ದು, ಚಿಕಿತ್ಸೆಗೆ ನಿರಾಕರಿಸಲಾಗಿದೆ. ಈ ನಡುವೆ ಕಿಮ್ಸ್ ಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.
ಹೃದಯಾಘಾತದಿಂದ ಅಸ್ವಸ್ಥರಾಗಿದ್ದ ಚನ್ನಬಸಪ್ಪ ಅವರನ್ನು ಇಲ್ಲಿನ ಸುಚಿರಾಯು ಆಸ್ಪತ್ರೆಗೆ ಕರೆದೊಯ್ಯುಲಾಗಿತ್ತು.
ಮುಷ್ಕರದ ಹಿನ್ನೆಲೆಯಲ್ಲಿ ಅಲ್ಲಿನ ಸಿಬ್ಬಂದಿ ದಾಖಲಿಸಿಕೊಳ್ಳಲು ನಿರಾಕರಿಸಿದ್ದರು ಎನ್ನಲಾಗಿದೆ. ನಂತರ ಕಿಮ್ಸ್ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ
ಜಗದೀಶ್ ಶೆಟ್ಟರ್ ಆಪ್ತರಾಗಿದ್ದರು.