
ಕೋಲಾರ: ಸಾಕು ತಂದೆಯೇ ಪುತ್ರಿಯ ಮೇಲೆ ರೇಪ್ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆರೋಪಿಗೆ ಜೀವಾವಧಿ ಶಿಕ್ಷೆಯ ತೀರ್ಪು ನೀಡಿ ಆದೇಶ ಹೊರಡಿಸಿದೆ.
ಸಾಕು ತಂದೆಯಾದ 40 ವರ್ಷ ವಯಸ್ಸಿನ ಚಂದ್ರು, ತನ್ನ ಸಾಕು ಪುತ್ರಿಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದನು. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದಳು ಎನ್ನಲಾಗಿದೆ.
ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದಾಗ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿತ್ತು. ವೈದ್ಯರ ದೂರಿನ ಮೇರೆಗೆ ಆರೋಪಿ ಚಂದ್ರು ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಅಪರಾಧಿ ಚಂದ್ರುಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
Comments are closed.