ಕರ್ನಾಟಕ

ಅಂತ್ಯಸಂಸ್ಕಾರದ ವೇಳೆ ಹೆಜ್ಜೇನು ದಾಳಿ; ವ್ಯಕ್ತಿ ಸಾವು

Pinterest LinkedIn Tumblr


ಮಂಡ್ಯ : ಅಂತ್ಯಸಂಸ್ಕಾರ ನಡೆಯುತ್ತಿದ್ದ ವೇಳೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬಿದರಹೊಸಹಳ್ಳಿಯಲ್ಲಿ ಘಟನೆ ನಡೆದಿದ್ದು ಗ್ರಾಮದ ಸಿದ್ದರಾಜು ಎಂಬಾತ ಮೃತ ಯುವಕ.

ಅಂತ್ಯ ಸಂಸ್ಕಾರಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದ್ದ ವೇಳೆ ಹೆಜ್ಜೇನು ದಾಳಿ ನಡೆಸಿದೆ. ಈ ವೇಳೆ ಗ್ರಾಮಸ್ಥರೆಲ್ಲಾ ಶವ ಬಿಟ್ಟು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಈ ಸಂದರ್ಭದಲ್ಲಿ ಸಿದ್ದರಾಜು ಮೇಲೆ ಹೆಚ್ಚಿನ ಪ್ರಮಾಣದಲ್ಲಿ ಹೆಜ್ಜೇನು ದಾಳಿ ನಡೆಸಿದ್ದರ ಪರಿಣಾಮ ಸಿದ್ದರಾಜು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮಹಿಳೆಯರು ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು ಕೆ.ಎಂ.ದೊಡ್ಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಘಟನೆ ನಡೆದು ಕೆಲವೊತ್ತಿನ ನಂತರ ಗ್ರಾಮಸ್ಥರು ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.

Comments are closed.