ಕರ್ನಾಟಕ

ಧಾರವಾಡದಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನ

Pinterest LinkedIn Tumblr


ಮೈಸೂರು: ಮುಂದಿನ ವರ್ಷ ಧಾರವಾಡದಲ್ಲಿ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಪರಿಷತ್ತಿನ ಕಾರ್ಯಕಾರಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಮೈಸೂರಿನಲ್ಲಿ ನಡೆಯುತ್ತಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ ನಿನ್ನೆ ನಡೆಸಿದ ಸಭೆಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನ ಧಾರವಾಡದಲ್ಲಿ ನಡೆಸಲು ತೀರ್ಮಾನಿಸಿದೆ.

ಈ ಹಿಂದೆ 1918, 1940 ಮತ್ತು 1957ರಲ್ಲಿ ಧಾರವಾಡದಲ್ಲಿ ಸಾಹಿತ್ಯ ಸಮ್ಮೇಳನಗಳು ನಡೆದಿದ್ದವು.

Comments are closed.