ದಾವಣಗೆರೆ: ಶೌಚಾಲಯ ನಿರ್ಮಾಣಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ ಕಾರಣ ತೀವ್ರವಾಗಿ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಹರಪ್ಪನಹಳ್ಳಿ ತಾಲೂಕಿನ ಮತ್ತಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅನ್ನಪೂರ್ಣ (21) ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾಳೆ. ಯುವತಿ ಮನೆಯ ಹತ್ತಿರ ಸಾರ್ವಜನಿಕ ಶೌಚಾಲಯ ನಿರ್ಮಿಸುವಂತೆ ಗ್ರಾಮ ಪಂಚಾಯಿಸಿ ಆದೇಶ ನೀಡಿತ್ತು. ಆದರೆ, ಇದಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈ ಸಂಬಂಧ ಗ್ರಾಮ ಪಂಚಾಯಿತಿಯಲ್ಲಿ ದೂರು ಕೂಡ ದಾಖಲಾಗಿತ್ತು. ಪ್ರಕರಣ ಸಂಬಂಧ ಗ್ರಾಮಸ್ಥರು ಹಾಗೂ ಯುವತಿ ತಂದೆ ಸುರೇಶಪ್ಪ ನಡುವೆ ಮೈಮನಸ್ಸು ಏರ್ಪಟ್ಟಿತ್ತು. ಇದರಿಂದ ತೀವ್ರವಾಗಿ ಮನನೊಂದ ಯುವತಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ತಿಳಿದುಬಂದಿದೆ.
ಕುಟುಂಬಸ್ಥರಿಗೆ ಪರಿಹಾರ ಧನವನ್ನು ನೀಡಲಾಗುತ್ತದೆ ಊರಿನ ನಾಯಕ ಚೆನ್ನನಾಯಕ್ ಅವರು ಹೇಳಿದ್ದಾರೆ. ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉಪ ಆಯುಕ್ತ ರಮೇಶ್ ಕುಮಾರ್ ಅವರು ಭರವಸೆ ನೀಡಿದ ಬಳಿಕ ಪೋಷಕರು ಅಂತಿಮ ಸಂಸ್ಕಾರವನ್ನು ನೆರವೇರಿಸಿದ್ದಾರೆ.
ಪ್ರಕಱಣ ಸಂಬಂಧ ಪಿಡಿಒ ವೀರೇಶ್ ಹಾಗೂ 13 ಮಂದಿಯ ವಿರುದ್ಧ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.