ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಿಲ್ಲ ಎಂದು ವಿಶೇಷ ತನಿಖಾ ತಂಡ ಸ್ಪಷ್ಟನೆ ನೀಡಿದೆ.
ಕೆಲವು ಮಾಧ್ಯಮಗಳಲ್ಲಿ, ವಿದ್ಯುನ್ಮಾನ ವಾಹಿನಿಗಳಲ್ಲಿ ಗೌರಿ ಲಂಕೇಶ್ ಹತ್ಯೆ ಸಂಬಂಧ ಕೆಲವನ್ನು ಬಂಧಿಸಲಾಗಿದೆ ಎಂದು ವರದಿ ಮಾಡಲಾಗಿತ್ತು.
ಇದಕ್ಕೆ ಕೂಡಲೇ ಪ್ರತಿಕ್ರಿಯೆ ನೀಡಿರುವ ಎಸ್‌ಐಟಿ ಯಾರನ್ನೂ ಬಂಧಿಸಿಲ್ಲ. ತನಿಖೆ, ವಿಚಾರಣೆ ಮುಂದುವರಿದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.