
ಸಹೋದ್ಯೋಗಿ ಕೊಲೆಗೆ ಸುಪಾರಿ ನೀಡಿದ ಆರೋಪದಲ್ಲಿ ಬಂಧಿತರಾಗಿರುವ ಹಿರಿಯ ಪತ್ರಕರ್ತ ರವಿ ಬೆಳಗೆರೆ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸೋಮವಾರ ಆದೇಶಿಸಿದೆ. ಸಹೋದ್ಯೋಗಿ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಆರೋಪದಲ್ಲಿ ಬೆಳಗೆರೆ ಅವರನ್ನು ಶುಕ್ರವಾರ (ಡಿ.8) ಅವರ ಕಚೇರಿಯಲ್ಲಿ ಬಂಧಿಸಿದ್ದು ಗೊತ್ತೇ ಇದೆ.
ಈ ಪ್ರಕರಣದಲ್ಲಿ ಕೇಳಿಬಂದ ಇನ್ನೊಂದು ಹೆಸರು ಯಶೋಮತಿ ಅವರದು. ಯಶೋಮತಿ ಸೇರಿದಂತೆ ಸುನಿಲ್ ಹೆಗ್ಗರವಳ್ಳಿ ಹಾಗೂ ಲೋಕೇಶ್ ಕೊಪ್ಪದ್ ಹೇಳಿಕೆಯನ್ನು ಪೊಲೀಸ್ ಅಧಿಕಾರಿಗಳೂ ದಾಖಲಿಸಿಕೊಂಡಿದ್ದಾರೆ. ತಮಗೂ ಹೆಗ್ಗರವಳ್ಳಿಗೂ ಕಚೇರಿ ಮತ್ತು ವೃತ್ತಿಪರ ಗೆಳೆತನ ಬಿಟ್ಟರೆ ಯಾವುದೇ ರೀತಿಯ ಸಂಬಂಧ ಇಲ್ಲ ಎನ್ನುವುದನ್ನು ಯಶೋಮತಿ ಹೇಳಿದ್ದಾರೆಂದು ಅಧಿಕಾರಿಗಳಿಗೆ ತಿಳಿಸಿದ್ದರು. ಇದೀಗ ತಮ್ಮ ಫೇಸ್ಬುಕ್ನಲ್ಲಿ ತಮ್ಮ ಮನದಾಳದ ಮಾತುಗಳನ್ನು ಬಿಚ್ಚಿಟ್ಟಿದ್ದಾರೆ.
‘ಅನುಮಾನಗಳು, ಅವಮಾನಗಳು, ಆರೋಪಗಳು ಬೆನ್ನ ಹಿಂದೆ ನೆರಳಿನಂತೆ ನಡೆದು ಬರುತ್ತಲೇ ಇವೆ. ನಿಖರವಾದ ಮಾಹಿತಿಯಿಲ್ಲದೆ ಟಿವಿ ಮಾಧ್ಯಮಗಳು ತಮಗೆ ಬೇಕಾದ ಬಣ್ಣ ತುಂಬಿ ಒಂದು ರೀತಿಯ ರಿವೇಂಜಿಗಿಳಿದಿವೆ. ಕೆಲವರಿಗೆ ಮನರಂಜನೆ, ಕೆಲವರಿಗೆ ಆತಂಕ. ಕೆಲವರಿಗೆ ಕುತೂಹಲ. ಇನ್ನು ಕೆಲವರಿಗೆ ಅನುಮಾನ….
‘ಏನೂ ಯೋಚನೆ ಮಾಡಬೇಡ ನಂಗೇನೂ ಆಗಲ್ಲ’ ಅಂತ ಚೆಲ್ಲಿ ಹೋದ ರವಿಯ ನಗುವೇ ಮನೆ ಮನ ತುಂಬಿದೆ. ಅದೇ ನಿರೀಕ್ಷೆಯಲ್ಲಿದ್ದೇವೆ ನಾನು ಹಿಮ.
ನಿಮಗೇನೂ ಆಗಲ್ಲ ವೀ. ನಮ್ಮೆಲ್ಲರ ಪ್ರಾರ್ಥನೆ ಸದಾ ನಿಮ್ಮೊಂದಿಗಿದೆ. ಇದೊಂದು ಸಣ್ಣ ಪರೀಕ್ಷೆ ಅಷ್ಟೆ. ಅದರಲ್ಲಿ ಗೆದ್ದು ಬರುವಿರೆಂಬ ನಂಬಿಕೆ ನನಗಿದೆ.’ ಎಂದಿದ್ದಾರೆ.
Comments are closed.