
ಮುದ್ದೇಬಿಹಾಳ: 2008ರ ಉಪ ಚುನಾವಣೆ ವೇಳೆ ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪ ಅವರಿಂದ 8 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದಿದ್ದರು ಎಂದು ಕೋಲಾರ ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಗಂಭೀರವಾಗಿ ಆರೋಪಿಸುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.
ಮುದ್ದೇಬಿಹಾಳದ ಕಾರ್ಯಕ್ರಮದಲ್ಲಿ ಮಾತನಾಡಿದ ವರ್ತೂರು ಪ್ರಕಾಶ್, 2008ರ ಉಪ ಚುನಾವಣೆ ಸಂದರ್ಭದಲ್ಲಿ ಕಿಕ್ ಬ್ಯಾಕ್ ಪಡೆದು ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಸೋಲಿಗೆ ಕಾರಣರಾಗಿದ್ದರು ಎಂದು ದೂರಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಯಡಿಯೂರಪ್ಪ ಅವರಿಂದ ಕಿಕ್ ಬ್ಯಾಕ್ ಪಡೆದ ಸಿದ್ದರಾಮಯ್ಯನವರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸದೆ ಸುಮ್ಮನಿದ್ದರು ಎಂದು ಹೇಳಿದ್ದಾರೆ.
-ಉದಯವಾಣಿ
Comments are closed.