ಕರ್ನಾಟಕ

ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಬಿಜೆಪಿ ಶಾಸಕ: ವೀಡಿಯೋ ವೈರಲ್

Pinterest LinkedIn Tumblr


ತುಮಕೂರು: ಕಾರ್ಯಕ್ರಮವೊಂದರಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಸುರೇಶ್ ಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಹಾಡಿ ಹೊಗಳಿದ ವೀಡಿಯೋ ಒಂದು ವೈರಲ್ ಆಗಿದೆ.

‘ಹೋರಾಟ, ಪ್ರಾಮಾಣಿಕತೆ ಮತ್ತು ಪರಿಶ್ರಮದಿಂದ ಸಿಎಂ ಸಿದ್ದರಾಮಯ್ಯನವರು ಶ್ರೇಷ್ಠ ಸ್ಥಾನಕ್ಕೆ ಹೋದರು. ಎಲ್ಲರೂ ಅವರಂತೆ ಸಾಧಕರಾಗಬೇಕು’ ಎಂದು ಹೇಳಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.

‘ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮಾಡಿದ ಕೆಲಸವನ್ನು ಕರ್ನಾಟಕ ರಾಜ್ಯದ ಎಲ್ಲಾ ಸಮುದಾಯದವರು ಒಪ್ಪುತ್ತಾರೆ ಎನ್ನುವುದನ್ನು ಹೆಮ್ಮೆಯಿಂದ ಹೇಳುತ್ತೇವೆ’ ಎಂದು ಬಿಜೆಪಿ ಶಾಸಕ ಬಿ.ಸುರೇಶ್ ಗೌಡ ಅವರು ಸಿದ್ದರಾಮಯ್ಯನವರನ್ನು ಹೊಗಳಿದ್ದಾರೆ.

ಈ ವಿಡಿಯೋ ತುಣುಕು ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ವೀಡಿಯೋವನ್ನು ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಾಗಿ ಶೇರ್ ಮಾಡುತ್ತಿದ್ದು, ಬಿಜೆಪಿ ಕಾಲೆಳೆಯಲು ಬಳಸಿಕೊಳ್ಳುತ್ತಿದ್ದಾರೆ.

Comments are closed.