ಕರ್ನಾಟಕ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪ್ರಾಂಶುಪಾಲ ಅರೆಸ್ಟ್

Pinterest LinkedIn Tumblr


ಚಿಕ್ಕಮಗಳೂರು: ವಿದ್ಯಾರ್ಥಿನಿ ಮೇಲೆ ಖಾಸಗಿ ಕಾಲೇಜಿನ ಪ್ರಾಂಶುಪಾಲನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ನೊಂದ ವಿದ್ಯಾರ್ಥಿನಿ ಎಸ್‌ಪಿ ಅಣ್ಣಾಮಲೈ ಅವರಿಗೆ ದೂರು ನೀಡಿದ್ದಾಳೆ.

ಎಲೈಟ್ ಕಾಲೇಜು ಪ್ರಿನ್ಸಿಪಾಲ್ ಪರಮೇಶ್ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ. ಈ ಹಿಂದೆಯೂ ಕೂಡ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಬಗ್ಗೆ ದೂರು ದಾಖಲಾಗಿದ್ದವು.

ಈದ್ ಮಿಲಾದ್ ಹಬ್ಬದ ದಿನ ವಿಶೇಷ ಕ್ಲಾಸ್ ನೆಪದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಚಿಕ್ಕಮಗಳೂರು ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ಸದ್ಯ ಆರೋಪಿ ಪರಮೇಶ್‌ನನ್ನು ಪೊಲೀಸರು ಬಂಧಿಸಿದ್ದು, 354, 376, 511 ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಿಸಿದ್ದಾರೆ.

Comments are closed.