ಕರ್ನಾಟಕ

ಶ್ರೀರಾಮುಲು ಆಪ್ತ, ಕೂಡ್ಲಿಗಿ ಶಾಸಕ ನಾಗೇಂದ್ರ ಜ.29ಕ್ಕೆ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

Pinterest LinkedIn Tumblr

ಬಳ್ಳಾರಿ: ಬಳ್ಳಾರಿ ಬಿಜೆಪಿ ಸಂಸದ ಶ್ರೀರಾಮುಲು ಅವರ ಆಪ್ತ ಹಾಗೂ ಕೂಡ್ಲಿಗಿ ಪಕ್ಷೇತರ ಶಾಸಕ ಬಿ.ನಾಗೇಂದ್ರ ಅವರು ಜನವರಿ 29ರಂದು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.

ಜನವರಿ 29ರಂದು ಹೊಸಪೇಟೆಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಎಸ್ ಟಿ ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗಮಿಸುತ್ತಿದ್ದು, ಅಂದೇ ನಾಗೇಂದ್ರ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ ಎನ್ನಲಾಗುತ್ತಿದೆ.

ನಾಗೇಂದ್ರ ಕಾಂಗ್ರೆಸ್ ಸೇರ್ಪಡೆ ಸಂಬಂಧ ಈಗಾಗಲೇ ದೆಹಲಿ ಹಾಗೂ ಕೆಪಿಸಿಸಿ ನಾಯಕರ ಮಟ್ಟದಲ್ಲಿ ಮಾತುಕತೆ ನಡೆದಿದ್ದು, ರಾಹುಲ್ ಗಾಂಧಿಯೂ ಗ್ರೀನ್ ಸಿಗ್ನಲ್ ನೀಡಿದ್ದಾರೆನ್ನಲಾಗಿದೆ. ಅಲ್ಲದೆ ಜನವರಿ 4ರಂದು ನಡೆಯಲಿರುವ ಬಿಜೆಪಿ ಪರಿವರ್ತನಾ ಸಮಾವೇಶಕ್ಕೆ ನಾಗೇಂದ್ರ ಗೈರು ಹಾಜರಾಗಲಿದ್ದಾರೆ ಎಂದು ವರದಿ ವಿವರಿಸಿದೆ.

2008ರಲ್ಲಿ ಬಿಜೆಪಿಯಿಂದ ಆಯ್ಕೆಯಾಗಿದ್ದ ಬಿ.ನಾಗೇಂದ್ರ, 2013ರಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿದ್ದರು. ಬಳಿಕ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಊಹಾಪೋಹ ಹಬ್ಬಿತ್ತು. ಆದರೆ ಮತ್ತೆ ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ಆಸೆ ಕಮರಿದಂತಾಗಿದೆ.

Comments are closed.