
ಚಿತ್ರದುರ್ಗ: ಕ್ರೂಸರ್ ಮತ್ತು ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ದಾರುಣವಾಗಿ ಮೃತಪಟ್ಟ ಘಟನೆ ಚಿತ್ರದುರ್ಗ ಹೊರವಲಯದ ಸಿಬಾರ ಬಳಿ ಸೋಮವಾರ ಬೆಳಿಗ್ಗೆ 7.30ಕ್ಕೆ ನಡೆದಿದೆ. ಎಂಟು ಜನ ಗಾಯಗೊಂಡಿದ್ದಾರೆ.
ಇಂದು ಮುಂಜಾನೆ ಚಿತ್ರದುರ್ಗದ ಸಿಬಾರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಘಟನೆ ಸಂಭವಿಸಿದ್ದು, ಚಲಿಸುತ್ತಿದ್ದ ಲಾರಿಗೆ ಕ್ರೂಸರ್ ಗಾಡಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್ ನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರೆಲ್ಲರೂ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿವಲಿಂಗ, ಸಿದ್ದಾರ್ಥ್, ವಿನೋಧ, ಶಿವಲಿಂಗ ಕೊಕ್ಕನೂರು, ರಾಕೇಶ್ ಎಂದು ತಿಳಿದು ಬಂದಿದೆ.
ಕ್ರೂಸರ್ ವಾಹನದಲ್ಲಿದ್ದವರು ಮೈಸೂರು ಪ್ರವಾಸ ಮುಗಿಸಿ ಬೆಳಗಾವಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಾಸಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಶ್ರೀನಾಥ ಜೋಶಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Comments are closed.