ಕರ್ನಾಟಕ

ಹುಣಸೂರಿನಲ್ಲಿ ಗದ್ದುಗೆ: JDS ಪರ ಅಭ್ಯರ್ಥಿಗೆ ಪ್ರತಾಪ್ ಸಿಂಹ ಮತ!

Pinterest LinkedIn Tumblr


ಮೈಸೂರು: ಹುಣಸೂರು ನಗರಸಭೆಯಲ್ಲಿ ಆಪರೇಶನ್ ಜೆಡಿಎಸ್ ತಂತ್ರದ ಮೂಲಕ ಅಧಿಕಾರದ ಗದ್ದುಗೆ ಏರಿದ್ದು, ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದ ಶಿವಕುಮಮಾರ್ ಹುಣಸೂರು ನಗರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಹುಣಸೂರು ಕ್ಷೇತ್ರದಲ್ಲಿ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ಸಕ್ರಿಯರಾಗಿದ್ದು, ಇತ್ತೀಚೆಗೆ ನಗರಸಭೆಯಲ್ಲಿನ ಕಾಂಗ್ರೆಸ್ ಸದಸ್ಯರನ್ನು ಜೆಡಿಎಸ್ ಗೆ ಸೆಳೆಯುವಲ್ಲಿ ಸಫಲರಾಗಿರುವುದಾಗಿ ವರದಿ ತಿಳಿಸಿದೆ.

ಏತನ್ಮಧ್ಯೆ ಕುತೂಹಲಕಾರಿ ಬೆಳವಣಿಗೆ ಎಂಬಂತೆ ಜೆಡಿಎಸ್ ಯುವ ಮುಖಂಡ ಪ್ರಜ್ವಲ್ ರೇವಣ್ಣ ಮಾತಿಗೆ ಮನ್ನಣೆ ನೀಡಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ ಜೆಡಿಎಸ್ ಪರ ಅಭ್ಯರ್ಥಿಗೆ ಮತ ಚಲಾಯಿಸಿದ್ದಾರೆ.

-ಉದಯವಾಣಿ

Comments are closed.