
ಹುಬ್ಬಳ್ಳಿ: ಮಹದಾಯಿ ನದಿ ನೀರಿನ ಹಂಚಿಕೆ ವಿವಾದ ಬಗೆ ಹರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಬೆನ್ನಲ್ಲೇ ಫೆಬ್ರವರಿ 4 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಇನ್ನೊಂದು ಬಂದ್ ನಡೆಸಲು ತೀರ್ಮಾನಿಸಲಾಗಿದೆ.
ಹುಬ್ಬಳ್ಳಿಯಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀವ್ರ ಚರ್ಚೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ಅವರು ‘ಪ್ರಧಾನಿ ಅವರು ಮಹದಾಯಿ ವಿಚಾರ ಬಗೆಹರಿಸಿ ಕರ್ನಾಟಕಕ್ಕೆ ನ್ಯಾಯ ಒದಗಿಸಿಕೊಟ್ಟರೆ ಫೆಬ್ರವರಿ 4 ರಂದು ನಾವು ಬಂದ್ ಮಾಡುವುದಿಲ್ಲ . ಇಲ್ಲವಾದಲ್ಲಿ ನಾವು ಜೈಲಿಗೆ ಹೋಗಲು ಸಿದ್ದ. ಉತ್ತರ ಕರ್ನಾಟಕದ ಸಾವಿರಾರು ರೈತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ’ಎಂದರು.
– ಉದಯವಾಣಿ
Comments are closed.