ಕರ್ನಾಟಕ

ಬೆಂಗಳೂರಿನಲ್ಲಿ ತಲೆನೋವಾಗಿದ್ದ ಇಬ್ಬರು ಕುಖ್ಯಾತ ಸರಗಳ್ಳರ ಬಂಧನ

Pinterest LinkedIn Tumblr


ಬೆಂಗಳೂರು: ಸಾರ್ವಜನಿಕರಿಗೆ ತಲೆನೋವಾಗಿದ್ದ ಇಬ್ಬರು ಕುಖ್ಯಾತ ಸರಗಳ್ಳರನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ.

ಶರೀಫ್​ ಹಾಗೂ ಇಮ್ರಾನ್​ ಎಂಬುವರನ್ನು ಬಂಧಿಸಿರುವ ಪೊಲೀಸರು ಅವರಿಂದ 15 ಲಕ್ಷ ಮೌಲ್ಯದ 620 ಗ್ರಾಂ ಚಿನ್ನಾಭರಣವನ್ನು ಜಪ್ತಿ ಮಾಡಿದ್ದಾರೆ. ಕಳೆದ ವಾರ ಶರೀಫ್​ ಸರ ಕದಿಯಲು ಯತ್ನಿಸಿ ವಿಫಲನಾಗಿದ್ದ. ಆ ವೇಳೆ ಸಾರ್ವಜನಿಕರು ಅವನನ್ನು ಬೆನ್ನಟ್ಟಿಕೊಂಡು ಹೋಗಿದ್ದರು.

ಕೈಗೆ ಗಾಯ ಮಾಡಿಕೊಂಡಿದ್ದ ಶರೀಫ್​ ಟೀ ಅಂಗಡಿಯೊಂದರಲ್ಲಿ ಕೈ ತೊಳೆದುಕೊಳ್ಳುತ್ತಿದ್ದ. ಈ ವೇಳೆ ಆತ ಸಿಕ್ಕಿ ಬಿದ್ದಿದ್ದ. ಆತನನ್ನು ಪೊಲೀಸರು ವಿಚಾರಣೆ ಮಾಡಿದಾಗ ಇಮ್ರಾನ್​ ಬಗ್ಗೆ ಕೂಡ ಮಾಹಿತಿ ದೊರೆತಿದೆ. ಇದರ ಆಧಾರದ ಮೇಲೆ ಆತನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ 30 ಪ್ರಕರಣಗಳು ಬಯಲಿಗೆ ಬಂದಿವೆ. ಗಿರಿನಗರ ಪೊಲೀಸರು ಇಲ್ಲಿಯ ವರೆಗೆ ಒಟ್ಟು 19 ಸರಗಳ್ಳತನದ ಪ್ರಕರಣಗಳನ್ನು ಭೇದಿಸಿದ್ದಾರೆ.

Comments are closed.