
ಚಿಕ್ಕಮಗಳೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ದುಷ್ಟ ತಮ್ಮನೊಬ್ಬ ಅಣ್ಣ, ಅತ್ತಿಗೆಗೆ ವಿಷ ಹಾಕಿ ಕೊಂದ ಘೋರ ಘಟನೆ ಮೂಡಿಗೆರೆ ತಾಲೂಕಿನ ಕಣಚೂರು ಗ್ರಾಮದಲ್ಲಿ ನಡೆದಿದೆ.
ವೆಂಕಟೇಶ್ ಮತ್ತು ರುಕ್ಮಿಣಿ ಮೃತ ದುರ್ದೈವಿಗಳು.
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಕಳೆದ ವಾರ ದಿನೇಶ್ ಎಂಬಾತ ಅಣ್ಣ ಹಾಗೂ ಅತ್ತಿಗೆಯ ಊಟದಲ್ಲಿ ವಿಷ ಬೆರೆಸಿ ಕೊಲೆಗೆ ಯತ್ನಿಸಿದ್ದ. ಘಟನೆಯಲ್ಲಿ ತೀವ್ರ ಅಸ್ವಸ್ಥಗೊಂಡಿದ್ದ ದಂಪತಿಯನ್ನು ನೆರೆಹೊರೆಯವರು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಪತಿ-ಪತ್ನಿ ಇಬ್ಬರು ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.