ಕರ್ನಾಟಕ

ಪದ್ಮಾವತ್ ಚಿತ್ರ ಪ್ರದರ್ಶನದ ವೇಳೆ ಬೆಳಗಾವಿಯ ಪ್ರಕಾಶ್ ಚಿತ್ರಮಂದಿರದ ಆವರಣದಲ್ಲಿ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿಗಳು

Pinterest LinkedIn Tumblr

ಬೆಳಗಾವಿ: ವಿವಾದಿತ ಪದ್ಮಾವತ್ ಸಿನಿಮಾ ಪ್ರದರ್ಶನಗೊಳ್ಳುತ್ತಿದ್ದ ಸಂದರ್ಭದಲ್ಲಿ ಬೆಳಗಾವಿಯ ಪ್ರಕಾಶ್ ಚಿತ್ರಮಂದಿರದ ಆವರಣದಲ್ಲಿ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.

ದ್ವಿಚಕ್ರ ವಾಹನದಲ್ಲಿ ಬಂದಿರುವ 4-5 ಮಂದಿ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದು, ಪಟಾಕಿ ಸಿಡಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಪೆಟ್ರೋಲ್ ಬಾಂಬ್ ಸ್ಫೋಟಗೊಳ್ಳುತ್ತಿದ್ದಂತೆಯೇ ಶಬ್ಧದಿಂದ ಬೆಚ್ಚಿಬಿದ್ದ ಚಲನಚಿತ್ರ ಮಂದಿರದ ಒಳಗಿದ್ದ ಪ್ರೇಕ್ಷಕರು ಹೊರಗೆ ಓಡಿ ಬಂದಿದ್ದಾರೆ. ಈ ವೇಳೆ ಸ್ಥಳದಲ್ಲಿ ನೂಕುನುಗ್ಗಲು ಉಂಟಾಗಿ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಪೆಟ್ರೋಲ್ ಬಾಂಬ್ ಸ್ಫೋಟಗೊಂಡ ಪರಿಣಾಮ ಅಕ್ಕಪಕ್ಕದವರು ಕೂಡ ಭಯಭೀತರಾಗಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Comments are closed.