ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನ ಕೊಕಟನೂರಿನಲ್ಲಿ ಮಹಿಳೆ ಮೇಲೆ ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ.
ಶಮಶಾದ ಬೇಗಂ ಮಕಾಂದಾರ(22) ಎಂಬಾಕೆ ಮೇಲೆ ನೆರೆಮನೆಯ ಅಕ್ಬರ್ ಗಾಲೀಬ್ ಬಾಗವಾನ(28) ಎಂಬಾತ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಬೇಗಂ ದೇಹ ಶೇ. 70ರಷ್ಟು ಸುಟ್ಟುಹೋಗಿದ್ದು, ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಮಹಿಳೆ ಬೇಗಂ ಜೀವನ್ಮರಣದ ಮಧ್ಯೆ ಹೋರಾಡುತ್ತಿದ್ದಾಳೆ.
ಕ್ಷುಲ್ಲಕ ಕಾರಣಕ್ಕಾಗಿ ಆರೋಪಿ ಅಕ್ಬರ್ ಬೆಂಕಿ ಹಚ್ಚಿದ್ದು, ಆರೋಪಿಗಾಗಿ ಪೊಲೀಸರು ಶೋಧಕಾರ್ಯ ಆರಂಭಿಸಿದ್ದಾರೆ. ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.