ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ಹೈಕೋರ್ಟ್ ಮೆಟ್ಟಿಲೇರುವುದಾಗಿ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.
ಚಾಮರಾಜಪೇಟೆಯ ಲಿಂಗಾಯತ ರುದ್ರಭೂಮಿಯಲ್ಲಿ ಗೌರಿ ಲಂಕೇಶ್ ಅವರ 56ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗೌರಿ ಹತ್ಯೆಗೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಬಗ್ಗೆ ಇಂದ್ರಜಿತ್ ಆರಂಭದಿಂದಲೂ ಅಸಮಾಧಾನ ವ್ಯಕ್ತಪಡಿಸುತ್ತ ಬಂದಿದ್ದರು. ನಾಲ್ಕು ತಿಂಗಳ ಹಿಂದೆ ಮನೆಯ ಬಾಗಿಲಲ್ಲೇ ಗೌರಿ ಅವರನ್ನು ಅಪರಿಚಿತರು ಹತ್ಯೆ ಮಾಡಿದ್ದರು.