ಕರ್ನಾಟಕ

ಅಪ್ರಾಪ್ತೆಯನ್ನು ಮದುವೆಯಾಗಲು ಪುಸಲಾಯಿಸಿ ಕರೆದೊಯ್ದಿದ್ದ ಕಾನಸ್ಟೇಬಲ್ ಬಂಧನ

Pinterest LinkedIn Tumblr


ಹಾವೇರಿ: ಅಪ್ರಾಪ್ತೆಯನ್ನು ಮದುವೆಯಾಗೋದಾಗಿ ನಂಬಿಸಿ ಪುಸಲಾಯಿಸಿ ಕರೆದೊಯ್ದಿದ್ದ ಪೊಲೀಸ್ ಕಾನ್​ಸ್ಟೇಬಲ್​ನನ್ನು ಬ್ಯಾಡಗಿ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಹೊನ್ನಪ್ಪ ಮಾಳಗಿ (23) ವರ್ಷ ಬಂಧಿತ ಆರೋಪಿ. ಈತ ಬೆಂಗಳೂರಿನ ಬಾಗಲೂರು ಪೊಲೀಸ್ ಠಾಣೆಯಲ್ಲಿ ಕಾನ್​ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಈತ ಮೂಲತಃ ಹಾವೇರಿಯ ರಾಣೇಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ನಿವಾಸಿ.

ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದಿಂದ ನಿನ್ನೆ ಬೆಳಗ್ಗೆ ಐದು ಗಂಟೆಗೆ ಹದಿನೇಳು ವರ್ಷದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದಿದ್ದ. ಈ ಸಂಬಂಧ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

Comments are closed.