ಸೋಮವಾರ ಪೇಟೆ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯತ ಸುಂಟಿಕೊಪ್ಪ ಬಳಿ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಚಾಲಕರಿಬ್ಬರು ದಾರುಣವಾಗಿ ಸಾವನ್ನಪ್ಪಿ 15 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ಅವಘಡ ಗುರುವಾರ ಸಂಭವಿಸಿದೆ.
ಮಡಿಕೇರಿಯಿಂದ ಹಾಸನ ಕಡೆಗೆ ತೆರಳುತ್ತಿದ್ದ ಬಸ್ ಮೈಸೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬಸ್‌ಗಳು ಢಿಕ್ಕಿಯಾಗಿವೆ. ಪರಿಣಾಮವಾಗಿ ಚಾಲರಾದ ಪಾಲಾಕ್ಷ ಮತ್ತು ಷರೀಫ್ ದಾರುಣವಾಗಿ ಸಾವನ್ನಪ್ಪಿದ್ದಾರೆ.ಗಾಯಾಳು 15 ಮಂದಿ ಪ್ರಯಾಣಿಕರ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಚಾಲಕ ಪಾಲಾಕ್ಷ ಲಾರಿ ಓವರ್ ಟೇಕ್ ಮಾಡುವ ಭರದಲ್ಲಿ ತೋರಿದ ಅವಸರವೇ ಅವಘಡಕ್ಕೆ ಕಾರಣ ಎಂದು ಹೇಳಲಾಗಿದೆ. ಘಟನೆಯಿಂದ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯಸ್ತವಾಯಿತು.
ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸುಂಟಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-ಉದಯವಾಣಿ