ಮೈಸೂರು: ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬನನ್ನು ಮರ್ಮಾಂಗ ಕತ್ತರಿಸಿ ಬರ್ಬರವಾಗಿ ಹತ್ಯೆಗೈದ ಘಟನೆ ಹುಣಸೂರಿನ ರಂಗನಾಥ ಬಡಾವಣೆಯಲ್ಲಿ ನಡೆದಿದೆ.
45 ವರ್ಷದ ಮಹೇಶ್ ಎಂಬಾತ ಹತ್ಯೆಗೀಡಾದ ವ್ಯಕ್ತಿಯಾಗಿದ್ದು ಈತ ವಿವಾಹವಾಗಿದ್ದರೂ ಪರಸ್ತ್ರೀ ಯೊಂದಗೆ ಅನೈತಿಕ ಸಂಬಂಧ ಹೊಂದಿದ್ದ ಎಂದು ಹೇಳಲಾಗಿದೆ.
ಮಹೇಶ್ ಪತ್ನಿಯ ಕಡೆಯವರು ಇನ್ನೊಂದು ಮದುವೆಯಾಗಿದ್ದಾನೆ ಎಂದು ಆಕ್ರೋಶಗೊಂಡು ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಮನೆಯ ಹೊರಗೆ ಮಲಗಿದ್ದ ಮಹೇಶ್ ಮೇಲೆ ದಾಳಿ ನಡೆಸಿ ಹತ್ಯೆಗೈದಿರುವ ಬಗ್ಗೆ ವರದಿಯಾಗಿದೆ.
ಸ್ಥಳಕ್ಕೆ ಹುಣಸೂರು ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.