
ಬಳ್ಳಾರಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರು ಕಾಶ್ಮೀರವನ್ನು ಬಿಟ್ಟುಕೊಟ್ಟಿದ್ದನ್ನು ಸಾಬೀತುಪಡಿಸಿದೆ ನಾನು ಈಗಲೇ ರಾಜಿನಾಮೆ ನೀಡುತ್ತೇನೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ಪ್ರಧಾನಿ ಶನಿವಾರ ಸವಾಲು ಹಾಕಿದ್ದಾರೆ.
ಇಂದು ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಜನಾಶೀರ್ವಾದ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ್ ಖರ್ಗೆ ಅವರು, ನೆಹರೂ ಕಾಶ್ಮೀರವನ್ನು ಬಿಟ್ಟುಕೊಟ್ಟಿದ್ದಾರೆ ಎನ್ನುವುದು ಸುಳ್ಳು. ಪ್ರಧಾನಿ ಮೋದಿ ತಮ್ಮ ಆರೋಪವನ್ನು ಸಾಬೀತುಪಡಿಸಿದರೆ ನಾನು ಈಗಲೇ ರಾಜೀನಾಮೆ ಕೊಡುತ್ತೇನೆ ಎಂದರು.
ಕಳೆದ 70 ವರ್ಷಗಳಿಂದ ಕಾಂಗ್ರೆಸ್ ಏನೂ ಮಾಡಿಲ್ಲ ಎಂದು ಮೋದಿ ಹೇಳುತ್ತಿದ್ದಾರೆ. ಆದರೆ ಕಾಂಗ್ರೆಸ್ ಏನೂ ಮಾಡದಿದ್ದರೆ ಚಹಾ ಮಾರುತ್ತಿದ್ದ ನೀವು ಇಂದು ಪ್ರಧಾನಿಯಾಗಲು ಸಾಧ್ಯವಾಗುತ್ತಿತ್ತೆ? ಎಂದು ಖರ್ಗೆ ಪ್ರಶ್ನಿಸಿದರು. ನಾವು 70 ವರ್ಷಗಳಿಂದ ಸಂವಿಧಾನವನ್ನು ರಕ್ಷಿಸಿದ್ದೇವೆ. ಆದರೆ ನೀವು ಈಗ ಅಧಿಕಾರಕ್ಕೆ ಸಂವಿಧಾನ ಬದಲಿಸುವ ಮಾತನಾಡುತ್ತಿದ್ದೀರಿ. ವೋಟ್ಗಾಗಿ ಈಗ ಸಂವಿಧಾನ ಶಿಲ್ಪಿ ಅಂಬೇಡ್ಕರ್ಅವರನ್ನು ನೆನಪಿಸಿಕೊಳ್ಳುತ್ತಿದ್ದೀರಿ ಎಂದು ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದರು.
ಗುಜರಾತ್ ಮಾಡೆಲ್ ಸುಳ್ಳೆಂಬುದು ಸಾಬೀತಾಗ್ತಿದೆ. ಗುಜರಾತ್ನಲ್ಲಿ ಹೆಣ್ಣುಮಕ್ಕಳಿಗೆ ಪೌಷ್ಟಿಕ ಆಹಾರದ ಕೊರತೆ ಇದೆ ಎಂದು ಮಲ್ಲಿಕಾರ್ಜುನ್ ಖರ್ಗೆ ಆರೋಪಿಸಿದ್ದಾರೆ.
Comments are closed.