ಕರ್ನಾಟಕ

ಈ ಬಾರಿಯ ಕರ್ನಾಟಕ ಬಜೆಟ್’ನಲ್ಲಿ ಬೆಂಗಳೂರಿಗೆ ಸಿಕ್ಕಿದೆ ಬಂಪರ್ ಕೊಡುಗೆ !

Pinterest LinkedIn Tumblr

ಬೆಂಗಳೂರು: ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ 2500 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವ ಕ್ರಿಯಾ ಯೋಜನೆಗಳಿಗೆ ಸಂಬಂಧಿಸಿದಂತೆ ಹಲವು ಯೋಜನೆಗಳನ್ನು ಈ ಬಾರಿಯ ಬಜೆಟ್‌ನಲ್ಲಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ನಮ್ಮ ಬೆಂಗಳೂರಿಗೆ ಪ್ರಕಟಿಸಿರುವ ಯೋಜನೆಗಳು ಈ ರೀತಿ ಇವೆ.

* 150 ಕಿ.ಮೀ ಉದ್ದದ ಅರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳ ವೈಟ್ ಟಾಪಿಂಗ್ ಕಾಮಗಾರಿ ಕೈಗೊಳ್ಳಲಾಗುತ್ತದೆ.
* ಬೃಹತ್ ಬೆಂಗಳೂರು ಮಹಾನಗರ ಪಾಲಿಗೆ ವತಿಯಿಂದ 40 ಕೆರೆಗಳ ಅಭಿವೃದ್ಧಿ.
* ಪಾಲಿಕೆ ವ್ಯಾಪ್ತಿಯ 100 ಕಿ.ಮೀ ಉದ್ದದ ಪ್ರಮುಖ ರಸ್ತೆಗಳ ಸಮಗ್ರ ಅಭಿವೃದ್ಧಿ.
* 150 ಕಿ.ಮೀ ಬೃಹತ್ ನೀರುಗಾಲುವೆ ಅಭಿವೃದ್ಧಿಪಡಿಸಲಾಗುತ್ತದೆ.
* 250 ಕಿ.ಮೀ ಉದ್ದದ ವಿವಿಧ ರಸ್ತೆಗಳ ಪಾದಚಾರಿ ಮಾರ್ಗಗಳ ಅಭಿವೃದ್ಧಿ.
* ಪಾಲಿಕೆ ವ್ಯಾಪ್ತಿಗೆ ಸೇರ್ಪಡೆ ಮಾಡಿರುವ 110 ಹಳ್ಳಿಗಳ ರಸ್ತೆಗಳ ಅಭಿವೃದ್ಧಿ.
* ಐ.ಟಿ.ಪಿ.ಎಲ್‌ಗೆ ಪರ್ಯಾಯ ಸಂಪರ್ಕ ಕಲ್ಪಿಸುವ 14 ರಸ್ತೆಗಳ ಅಭಿವೃದ್ಧಿ.
* ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಸಿಗ್ನಲ್ ಮುಕ್ತ ಕಾರಿಡಾರ್ ಕಾಮಗಾರಿಗೆ ಸಂಬಂಧಿಸಿದಂತೆ ಒಡಂಬಡಿಕೆಯ ಪ್ರಕಾರ ಹೆಚ್.ಎ.ಎಲ್ ಸಂಸ್ಥೆಯವರು ನೀಡಿರುವ ಸ್ವತ್ತಿಗೆ ಬದಲಾಗಿ, ಎನ್.ಎ.ಎಲ್ ವಿಂಡ್ ಟನಲ್ ರಸ್ತೆ ನಿರ್ಮಾಣ.
* ಸ್ಮಾಟ್ ಸಿಟಿ ಯೋಜನೆಗೆ ಬೆಂಗಳೂರು ನಗರ ಸೇರ್ಪಡೆ; ವಿಶೇಷ ಉದ್ದೇಶ ವಾಹಕದ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರದ ತಲಾ 500 ಕೋಟಿ ಅನುದಾನದೊಂದಿಗೆ ಕ್ರಿಯಾ ಯೋಜನೆ ಸಿದ್ಧ;
* ಪ್ರದೇಶಾಧಾರಿತ ಮಾದರಿಯಲ್ಲಿ ನಗರದ 25 ಪ್ರಮುಖ ರಸ್ತೆಗಳನ್ನು ಟೆಂಡರ್ ಶ್ಯೂರ್ ಮಾದರಿಯಲ್ಲಿ ಅಭಿವೃದ್ಧಿ.

* ಐತಿಹಾಸಿಕ ವಾಣಿಜ್ಯ ಕೇಂದ್ರವಾದ ಕೆ.ಆರ್. ಮಾರುಕಟ್ಟೆ ಪ್ರದೇಶದ ಪುನಶ್ಚೇತನ, ಶಿವಾಜಿನಗರದ ಸಂಯೋಜಿತ ಸಂಚಾರಿ ಕೇಂದ್ರ, ಕಬ್ಬನ್ ಉದ್ಯಾನ ಅಭಿವೃದ್ಧಿ, ಸ್ವತಂತ್ರಪಾಳ್ಯ ಪ್ರದೇಶದ ಅಭಿವೃದ್ಧಿ, ಹಲಸೂರು ಕೆರೆ ಮತ್ತು ಸ್ಯಾಂಕಿ ಕೆರೆಗಳ ಅಭಿವೃದ್ಧಿ, ಕೆ.ಸಿ.ಜನರಲ್ ಆಸ್ಪತ್ರೆಯ ನವೀಕರಣ.

* ಗಾಂಧಿಬಜಾರ್, ಗಾಂಧಿನಗರದ ಸುಖಸಾಗರ್ ಹೋಟೆಲ್ ಬಳಿ, ಡಿಸ್ಪೆನ್ಸರಿ ರಸ್ತೆ ಬಳಿ, ರೇಸ್ ಕೋರ್ಸ್ ಬಳಿ, ಶೇಷಾದ್ರಿ ರಸ್ತೆ, ಕೋರಮಂಗಲ 4ನೇ ಬಡವಾಣೆ ಬಳೀ, ಜಯನಗರದ ಕಾಂಪ್ಲೆಕ್ಸ್ ಬಳೀ ಹಾಗೂ ಪಾಲಿಕೆಯ ಕೇಂದ್ರ ಕಚೇರಿಯ ಆವರಣದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಬಹುಮಹಡಿ ವಾಹನ ನಿಲ್ದಾಣಗಳ ನಿರ್ಮಾಣ.

ಬೆಂಗಳೂರು ಮೆಟ್ರೋ ನಿಗಮ ನಿಯಮಿತ
* ಹಂತ -2 ಮೆಟ್ರೋ ರೈಲು ಯೋಜನೆಯ ಹಂತ-2ರಲ್ಲಿ ಬೈಯ್ಯಪ್ಪನಹಳ್ಳಿಯಿಂದ ವೈಟ್‍ಫೀಲ್ಡ್‌ವರೆಗೆ, ಮೈಸೂರು ರಸ್ತೆಯಿಂದ ಕೆಂಗೇರಿಯವರೆಗೆ, ನಾಗಸಂದ್ರದಿಂದ ಬಿ.ಐ.ಇಸಿ.ವರೆಗೆ, ಯಲಚೇನಹಳ್ಳಿಯಿಂದ ಅಂಜನಾಪುರ ಟೌನ್‍ಷಿಪ್‍ವರೆಗೆ, ಆರ್.ವಿ.ರಸ್ತೆಯಿಂದ ಬೊಮ್ಮಸಂದ್ರದವರೆಗೆ ಮತ್ತು ಗೊಟ್ಟಿಗೆರೆಯಿಂದ ನಾಗವಾರದವರೆಗೆ ಒಟ್ಟು 72.095 ಕಿ.ಮೀ ಉದ್ದದ ಕಾಮಗಾರಿಯನ್ನು 26,495.14 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿದ್ದು ಮಾರ್ಚ್ 2021ರ ಅಂತ್ಯದೊಳಗೆ ಸಾರ್ವಜನಿಕ ಸೇವೆಗೆ ಸಮರ್ಪಿಸಲಾಗುವುದು.

* ಹಂತ-2ಎ: ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆ.ಆರ್. ಪುರಂವರೆಗಿನ 17 ಕಿ.ಮೀ ಹೊರವರ್ತುಲ ಮಾರ್ಗದಲ್ಲಿ 4202 ಕೋಟಿ ರೂ. ಅಂದಾಜಿನ ಹೊಸ ಮೆಟ್ರೋ ಮಾರ್ಗಕ್ಕೆ ಅನುಮೋದನೆ ನೀಡಲಾಗಿದೆ.

* ಹಂತ-2ಬಿ: 5950 ಕೋಟಿ ರೂ. ಅಂದಾಜು ವೆಚ್ಚದ 29.06 ಕಿ.ಮೀ ಉದ್ದದ ನಾಗವಾರ ಮೆಟ್ರೋ ನಿಲ್ದಾಣದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗ ಯೋಜನೆಗೆ ಅನುಮೋದನೆ ನೀಡಲಾಗಿದೆ.

2018-2019 ಸಾಲಿನ ಹೊಸ ಯೋಜನೆಗಳು
2018-19ರಲ್ಲಿ 105.55 ಕಿ.ಮೀ ಉದ್ದದ ಬೆಂಗಳೂರು ಮೆಟ್ರೋ ಹಂತ-3 ಯೋಜನೆಯ ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಹಂತ-3ರಲ್ಲಿ ಜೆಪಿ ನಗದಿಂದ ಹೆಬ್ಬಾಳದ ಮೂಲಕ ಕೆ.ಆರ್. ಪುರಂ, ಟೋಲ್‌ಗೇಟ್‍ನಿಂದ ಕಡಬಗೆರೆ, ಗೊಟ್ಟಿರೆಯಿಂದ ಬಸವಾಪುರ, ಆರ್.ಕೆ ಹೆಗ್ಡೆ ನಗರದಿಂದ ಏರೋಸ್ಪೇಸ್ ಪಾರ್ಕ್, ಕೋಗಿಲು ಕ್ರಾಸ್‌ನಿಂದ ರಾಜಾನುಕುಂಟೆ, ಬೊಮ್ಮಸಂದ್ರದಿಂದ ಅತ್ತಿಬೆಲೆ ಮತ್ತು ಇಬ್ಬಲೂರಿನಿಂದ ಕರ್ಮಲ್ ರಾಮ್ ಮಾರ್ಗಗಗಳನ್ನು ಕೈಗೆತ್ತಿಕೊಳ್ಳಲು ಉದ್ದೇಶಿಸಿದೆ. ಇದರಿಂದಾಗಿ ಎಲ್ಲಾ ಹಂತದ ಮಾರ್ಗಗಳನ್ನು ಕೈಗೆತ್ತಿಕೊಳ್ಳಲು ಉದ್ದೇಶಿಸಿದೆ. ಇದರಿಂದಾಗಿ ಎಲ್ಲಾ ಹಂತದ ಮಾರ್ಗಗಳೂ ಸೇರಿದಂತೆ ಒಟ್ಟಾರೆ ಮೆಟ್ರೋ ಮಾರ್ಗದ ಉದ್ದ 266 ಕಿ.ಮೀಗಳಾಗಲಿದೆ.

Comments are closed.