ಕರ್ನಾಟಕ

ನೋ ಬ್ರೇಕ್! 4 ಗಂಟೆ 10 ನಿಮಿಷ ಕಾಲ ಬಜೆಟ್ ಮಂಡಿಸಿದ ಸಿದ್ದರಾಮಯ್ಯ

Pinterest LinkedIn Tumblr


ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2018-19ನೇ ಸಾಲಿನ ಬಜೆಟ್ ಅನ್ನು ಮುಖ್ಯಮಂತ್ರಿಯಾಗಿ ಆರನೇ ಹಾಗೂ ಹಣಕಾಸು ಸಚಿವರಾಗಿ ದಾಖಲೆಯ 13ನೇ ಬಜೆಟ್ ಮಂಡಿಸಿದ್ದರು.

ವಿಧಾನಸಭೆಯಲ್ಲಿ ಬರೋಬ್ಬರಿ 4ಗಂಟೆ 10ನಿಮಿಷಗಳ ಕಾಲ ಸುದೀರ್ಘವಾಗಿ ಬಜೆಟ್ ಮಂಡಿಸುವ ಮೂಲಕ ಮತ್ತೊಂದು ದಾಖಲೆ ಬರೆದಿದ್ದಾರೆ. 11.35ಕ್ಕೆ 163ಪುಟಗಳ ಬಜೆಟ್ ಮಂಡನೆ ಆರಂಭವಾಗಿದ್ದು, 3.45ಕ್ಕೆ ಮುಕ್ತಾಯಗೊಳಿಸಿದ್ದರು.

ಮಧ್ಯೆ ಯಾವುದೇ ವಿಶ್ರಾಂತಿ ತೆಗೆದುಕೊಳ್ಳದೆಯೇ ಸುದೀರ್ಘವಾಗಿ ಸಿಎಂ ಸಿದ್ದರಾಮಯ್ಯನವರು ಬಜೆಟ್ ಮಂಡಿಸಿದ್ದು ಹೆಚ್ಚು ಗಮನ ಸೆಳೆದಿದೆ.

-ಉದಯವಾಣಿ

Comments are closed.