ಕರ್ನಾಟಕ

ಕಾಂಗ್ರೆಸ್, ಬಿಜೆಪಿಗೆ ಪಾಠ ಕಲಿಸುವ ಸಮಯ ಬಂದಿದೆ:  ಬೆಂಗಳೂರಿನಲ್ಲಿ ಮಾಯಾವತಿ

Pinterest LinkedIn Tumblr

ಬೆಂಗಳೂರು: ಕಾಂಗ್ರೆಸ್ ಮತ್ತು ಬಿಜೆಪಿಗೆ ಪಾಠ ಕಲಿಸುವ ಸಮಯ ಈಗ ಬಂದಿದ್ದು, ಎಚ್ ಡಿ ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಿ. ಸರ್ವರಿಗೂ ಸಮಪಾಲು ಎಂಬ ತತ್ವದಡಿ ಸರ್ಕಾರ ನಡೆಸುತ್ತೇವೆ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ಶನಿವಾರ ಹೇಳಿದ್ದಾರೆ.

ಇಂದು ಯಲಹಂಕದಲ್ಲಿ ಜೆಡಿಎಸ್ ವಿಕಾಸ ಪರ್ವ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮಾಯಾವತಿ ಅವರು, ರಾಜ್ಯ ಸರ್ಕಾರ ದಲಿತರ ಪರವಾದ ಯಾವುದೇ ಯೋಜನೆಗಳನ್ನು ರೂಪಿಸಲ್ಲ. ಹೀಗಾಗಿ ಈ ಬಾರಿ ಕಾಂಗ್ರೆಸ್ ಮತ್ತು ಬಿಜೆಪಿ ರಾಜ್ಯದಲ್ಲಿ ಅಧಿಕಾರ ಹಿಡಿಯದಂತೆ ತಡೆಯಬೇಕಾದ ಜವಾಬ್ದಾರಿ ನಿಮ್ಮ ಮೇಲೆ ಇದೆ ಎಂದರು.

ಕಾಂಗ್ರೆಸ್ ಕುತಂತ್ರದಿಂದ ಡಾ ಬಿಆರ್ ಅಂಬೇಡ್ಕರ್‌ಅವರನ್ನು ಚುನಾವಣೆಯಲ್ಲಿ ಸೋಲಿಸಿತ್ತು. ಅಷ್ಟೆ ಅಲ್ಲ ಅವರು ಅಂಬೇಡ್ಕರ್‌ಅವರಿಗೆ ಭಾರತರತ್ನ ಗೌರವನ್ನೂ ನೀಡದೆ ಅವಮಾನ ಮಾಡಿದ್ದರು ಎಂದು ಮಾಯಾವತಿ ಆರೋಪಿಸಿದರು.

ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ ಮಾಯಾವತಿ, ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶದಲ್ಲಿರುವ ಕಪ್ಪು ಹಣ ವಾಪಸ್ ತರುವುದಾಗಿ ಹೇಳಿದ್ದರು. ಆದರೆ ಒಂದು ರುಪಾಯಿ ಹಣವಾದಲೂ ತಂದಿದ್ದಾರೆಯೇ? ಎಂದು ಪ್ರಶ್ನಿಸಿದರು. ಉದ್ಯೋಗ ಕೊಡಿ ಎಂದರೇ ಪ್ರಧಾನಿ ನರೇಂದ್ರ ಮೋದಿ ಅವರು ಪಕೋಡ ಮಾರಿ ಎನ್ನುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Comments are closed.