ಕರ್ನಾಟಕ

ಜೆಡಿಎಸ್-ಬಿಎಸ್ಪಿ ಮೈತ್ರಿಯಿಂದ ಧಕ್ಕೆಯಿಲ್ಲ: ಸಿಎಂ ಸಿದ್ದರಾಮಯ್ಯ

Pinterest LinkedIn Tumblr


ರಾಯಚೂರು: ಜೆಡಿಎಸ್, ಬಿಎಸ್‍ಪಿ ಮೈತ್ರಿ ಯಾವುದೇ ಪರಿಣಾಮ ಬೀರುವುದಿಲ್ಲ. ಕಾಂಗ್ರೆಸ್ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಎಂದು ಸಿಎಂ ಸಿದ್ದ ರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಯಚೂರು ಜಿಲ್ಲೆ ಮಸ್ಕಿ ವಿಧಾನ ಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನಾ ಸಮಾರಂಭಕ್ಕೆ ಆಗಮಿ ಸಿದ ಅವರು ಸುದ್ದಿಗಾರರೊಂದಿಗೆ ಮಾತ ನಾಡಿದರು.

ಶೋಷಿತರು ಮತ್ತು ಹಿಂದುಳಿದವರನ್ನು ಮುಖ್ಯವಾಹಿನಿಗೆ ತರಲು, ಸಾಮಾಜಿಕ ನ್ಯಾಯ ಪಾಲಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಹೀಗಾಗಿ, ಬಿಎಸ್‍ಪಿ, ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಾಕ್ಷಣ ಕಾಂಗ್ರೆಸ್‍ಗೆ ಹಾನಿ ಎಂಬ ವಾದ ಸ ಯಲ್ಲ ಎಂದು ಹೇಳಿದರು. ಜೆಡಿಎಸ್ ಮತ್ತು ಬಿಎಸ್‍ಪಿ ಮೈತ್ರಿಯಿಂದಾಗಿ ದಲಿತರ ಮತಗಳು ವಿಭಜನೆಯಾಗಲಿದ್ದು, ಕಾಂಗ್ರೆಸ್‍ಗೆ ಹೊಡೆತ ಬೀಳಲಿದೆ ಎಂಬ ಅಭಿಪ್ರಾ ಯ ವ್ಯಾಪಕವಾಗಿ ಕೇಳಿಬರುತ್ತಿವೆ. ಆದರೆ, ಸಾಂಪ್ರದಾಯಿಕ ಮತಗಳು ಕಾಂಗ್ರೆಸ್‍ನಿಂದ ಚದುರಿ ಹೋಗಲ್ಲ ಎಂಬ ವಿಶ್ವಾಸವಿದೆ.

ಹಿಂದಿನ ಯಾವ ಸರಕಾರಗಳೂ ಪತ್ರಕರ್ತರ ಬೇಡಿಕೆಗಳನ್ನು ಪರಿಗಣಿಸಿರಲಿಲ್ಲ. ನಮ್ಮ ಸರ್ಕಾರ ಇದನ್ನು ಗುರುತಿಸಿದೆ. ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಮಾಧ್ಯಮ ಸಂಜೀವಿನಿ, ರಾಜೀವ್ ಆರೋಗ್ಯ ಭಾಗ್ಯ, ಪತ್ರಿಕಾ ವಿತರಕರ ಕ್ಷೇಮ ನಿಧಿ, ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‍ಪಾಸ್ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಹೇಳಿ ದರು.

ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ 1557 ಕೋಟಿ ರು. ವೆಚ್ಚದ 116 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿದ್ದರಾಮಯ್ಯ ಅವರು, 560 ಕೋಟಿ ರು. ವೆಚ್ಚದಲ್ಲಿ ಪೂರ್ಣಗೊಂಡ 326 ಕಾಮಗಾರಿಗಳನ್ನು ಉದ್ಘಾಟನೆ ಮಾಡಿದರು.

Comments are closed.