ಕರ್ನಾಟಕ

ಮೈಸೂರು-ಉದಯಪುರ ‘ಪ್ಯಾಲೆಸ್ ಕ್ವೀನ್ ಹಮ್ ಸಫರ್’ ರೈಲು ಸಂಚಾರಕ್ಕೆ ಮೋದಿ ಚಾಲನೆ

Pinterest LinkedIn Tumblr

ಮೈಸೂರು: ಮೈಸೂರು-ಬೆಂಗಳೂರು ವಿದ್ಯುತ್ ರೈಲು ಮಾರ್ಗ ಹಾಗೂ ಮೈಸೂರು-ರಾಜಸ್ತಾನದ ಉದಯಪುರ ನಡುವಣೆ ಪ್ಯಾಲೆಸ್ ಕ್ವೀನ್ ಹಮ್ ಸಫರ್ ನೂತನ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದರು.

ಶ್ರವಣಬೆಳಗೊಳದಿಂದ ಮೈಸೂರಿಗೆ ಆಗಮಿಸಿದ ಪ್ರಧಾನಿ, ಮೈಸೂರಿನ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ 1ರಲ್ಲಿ ರೈಲುಗಳ ಸಂಚಾರಕ್ಕೆ ಚಾಲನೆ ನೀಡಿದರು.

ಇನ್ನು ಇದೇ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ವಾಜುಭಾಯಿ ವಾಲಾ, ಕೇಂದ್ರ ಸಚಿವ ಸದಾನಂದಗೌಡ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Comments are closed.