ಕರ್ನಾಟಕ

ಬೆಂಗಳೂರು ದೇಶದ 2ನೇ ರಾಜಧಾನಿಯಾಗಬೇಕು: ದೇಶಪಾಂಡೆ

Pinterest LinkedIn Tumblr


ಮೈಸೂರು: ಅನೇಕ ವೈಶಿಷ್ಟ್ಯಹೊಂದಿರುವ ಬೆಂಗಳೂರು ಮಹಾನಗರವನ್ನು ದೇಶದ ಎರಡನೇ ರಾಜಧಾನಿಯಾಗಿ ಮಾಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಆರ್. ವಿ. ದೇಶಪಾಂಡೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ನಗರದಲ್ಲಿ ಸೋಮವಾರ ನಡೆದ ಮೈಸೂರು-ಬೆಂಗಳೂರು ರೈಲು ಮಾರ್ಗದ ಜೋಡಿಹಳಿ ಹಾಗೂ ವಿದ್ಯುಧೀಕೃತ ಮಾರ್ಗದ ಲೋಕಾರ್ಪಣೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ಮೋದಿ ದೇಶಪಾಂಡೆ ಅವರು ಮನವಿ ಸಲ್ಲಿಸಿದರು. ‘‘ತಾವು ಈ ಹಿಂದೆ ಇದೇ ವಿಷಯ ಕುರಿತು 2018ರ ಜನೇವರಿ 5ರಂದು ತಮಗೆ ಬರೆದ ಪತ್ರಕ್ಕೆ ಇಡೀ ದಕ್ಷಿಣ ಭಾರತದಲ್ಲಿ ವ್ಯಾಪಕ ಜನ ಬೆಂಬಲ ವ್ಯಕ್ತವಾಗಿದೆ. ಇದಕ್ಕೆ ವೃತ್ತಿಪರರು, ಗಣ್ಯರು ಮತ್ತು ರಾಜ್ಯಗಳ ಉದ್ಯಮಿಗಳು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’’ ಎಂದು ತಮ್ಮ ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

‘‘ತುಂಬಾ ವಿಶಾಲ ರಾಷ್ಟ್ರವಾದ ಭಾರತವು ಈಗ ಸುಗಮ ಆಡಳಿತ, ಆಡಳಿತ ಸುಧಾರಣೆಗಳು, ರಾಷ್ಟ್ರೀಯ ಪುನಾರಚನೆ ಮತ್ತು ಸಹಭಾಗಿತ್ವಗಳಲ್ಲಿ ಸಂಪೂರ್ಣ ಪರಿವರ್ತನೆಯ ಹಾದಿಯಲ್ಲಿದೆ. ಆದ್ದರಿಂದ ಬೆಂಗಳೂರು ದೇಶದ 2ನೇ ರಾಜಧಾನಿಯಾಗಲು ಅತ್ಯಂತ ಸೂಕ್ತ ಸ್ಥಳವಾಗಿದೆ ಎಂದು ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ’’.

Comments are closed.