ಕರ್ನಾಟಕ

ಪುತ್ರನಿಂದ ಹಲ್ಲೆ: ವಿಧಾಸಭೆಯಲ್ಲಿ ಕ್ಷಮೆಯಾಚಿಸಿದ ಕಾಂಗ್ರೆಸ್ ಶಾಸಕ ಹ್ಯಾರಿಸ್

Pinterest LinkedIn Tumblr

ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಶಾಸಕ ಎನ್ಎ ಹ್ಯಾರಿಸ್ ಅವರು ನಗರದ ಪ್ರತಿಷ್ಠಿತ ಯುಬಿ ಸಿಟಿಯ ಪಬ್ ನಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ತಮ್ಮ ಪುತ್ರ ಭಾಗಿಯಾಗಿರುವುದಕ್ಕೆ ಮಂಗಳವಾರ ವಿಧಾನಸಭೆಯಲ್ಲಿ ಕ್ಷಮೆಯಾಚಿಸಿದ್ದಾರೆ.

ಕೆಲವೊಮ್ಮೆ, ಕೆಲ ಕೆಟ್ಟ ಸಂದರ್ಭಗಳಲ್ಲಿ ಇಂತಹ ಘಟನೆಗಳು ಸಂಭವಿಸುತ್ತವೆ. ಈ ಘಟನೆಗಾಗಿ ನಾನು ಸದನ ಮತ್ತು ಸದಸ್ಯರ ಕ್ಷಮೆಯಾಚಿಸುತ್ತೇನೆ ಎಂದು ಹ್ಯಾರಿಸ್ ಅವರು ವಿಧಾನಸಭೆಗೆ ತಿಳಿಸಿದರು.

ಕಳೆದ ಶನಿವಾರ ರಾತ್ರಿ ಯುಬಿ ಸಿಟಿಯ ಪಬ್ ಕಮ್ ರೆಸ್ಟೋರೆಂಟ್ ನಲ್ಲಿ ವಿದ್ವತ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹ್ಯಾರಿಸ್ ಅವರ ವಿರುದ್ಧ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ.

ನಿನ್ನೆ ಕಬ್ಬನ್ ಪಾರ್ಕ್ ಪೊಲೀಸರಿಗೆ ಶರಣಾಗಿದ್ದ ಆರೋಪಿ ಮಹಮ್ಮದ್ ನಲಪಾಡ್ ಹ್ಯಾರಿಸ್ ಈಗ ಪೊಲೀಸ್ ವಶದಲ್ಲಿದ್ದಾರೆ.

ಘಟನೆಯ ನಂತರ ಆರೋಪಿ ನಲಪಾಡ್ ನನ್ನು ಕಾಂಗ್ರೆಸ್ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದೆ. ನಲಪಾಡ್ ಬೆಂಗಳೂರು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನಿ ಕಾರ್ಯದರ್ಶಿಯಾಗಿದ್ದರು.

Comments are closed.