ಕರ್ನಾಟಕ

ಹಲ್ಲೆ ಪ್ರಕರಣ; ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಫೆ.26ಕ್ಕೆ ಮುಂದೂಡಿಕೆ

Pinterest LinkedIn Tumblr

ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಸೋಮವಾರಕ್ಕೆ ಮುಂದೂಡಿದೆ.

ಇಂದು ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ 63ನೇ ಸೆಷನ್ಸ್ ಕೋರ್ಟ್ ನ ನ್ಯಾಯಾಧೀಶರು, ನಲಪಾಡ್ ಜಾಮೀನು ಅರ್ಜಿಯ ವಿಚಾರಣೆಯನ್ನು ಫೆಬ್ರವರಿ 26ಕ್ಕೆ ಮುಂದೂಡಿದ್ದಾರೆ.

ಇನ್ನು ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಶ್ಯಾಮ್ ಸುಂದರ್ ನ್ಯಾಯಾಲಯವನ್ನು ಕೋರಿದ್ದು ಈ ಕೋರಿಕೆಯನ್ನು ಪುರಸ್ಕರಿಸಿದ ನ್ಯಾಯಾಧೀಶರು ಫೆಬ್ರವರಿ 26ರಂದು ಹೆಚ್ಚುವರಿ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ವ್ಯಕ್ತಿಯ ವಾದ ಆಲಿಸಬೇಕೇ, ಬೇಡವೇ ಎಂಬುದನ್ನು ಪರಿಗಣಿಸಲು ಆದೇಶ ಮುಂದೂಡಿದ್ದಾರೆ.

Comments are closed.